ನಟಿ Karunya Ram ಅವರು ಒಡಹುಟ್ಟಿದ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ದೂರು ನೀಡಿದ್ದಾರೆ.

ಕನ್ನಡ ಚಿತ್ರರಂಗದ ನಟಿ ಹಾಗೂ ಮಾಜಿ ಬಿಗ್ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಮ್ಮ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಕಾರುಣ್ಯಾ ರಾಮ್ ದೂರು
ಈ ಕುರಿತು ಕಾರುಣ್ಯಾ ರಾಮ್ ಅವರು CCB ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಸಮೃದ್ಧಿ ರಾಮ್ ಸೇರಿದಂತೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಹಾಗೂ ಸಾಗರ್ ಎಂಬುವವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಇದನ್ನು ಓದಿ : ಶಬರಿಮಲೆಯಲ್ಲಿ ಬೆಳಗಿದ ʻಮಕರ ಜ್ಯೋತಿʼ

ದೂರಿನಲ್ಲಿ ಏನಿದೆ?
ಮೇಕಪ್ ಆರ್ಟಿಸ್ಟ್ ಆಗಿರುವ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ನಲ್ಲಿ ತೊಡಗಿಕೊಂಡು ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ಇದಲ್ಲದೆ, ವ್ಯವಹಾರದಲ್ಲೂ ಭಾರೀ ನಷ್ಟ ಅನುಭವಿಸಿದ್ದು, ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದುಕೊಂಡಿದ್ದಾರೆ ಎಂದು ಕಾರುಣ್ಯಾ ರಾಮ್ ಆರೋಪಿಸಿದ್ದಾರೆ.
ಸಾಲ ತೀರಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಬಳಸಿಕೊಂಡು ವಂಚನೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಾಲಗಾರರು ಹಣ ವಾಪಸು ಪಡೆಯಲು ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ.
ಇನ್ನು, ತಮ್ಮ ಹಣವನ್ನು ದುರುಪಯೋಗಪಡಿಸಿಕೊಂಡಿದ್ದ ಬಗ್ಗೆ ಪ್ರಶ್ನಿಸಿದ ಕಾರಣಕ್ಕೆ ಸಮೃದ್ಧಿ ರಾಮ್ ಅವರನ್ನ ಮನೆಯಿಂದ ಹೊರಗೆ ಹಾಕಿದ್ದಾರೆ ಎಂದು Karunya Ram ಆರೋಪಿಸಿದ್ದಾರೆ. ಅಲ್ಲದೆ, ವಾಟ್ಸಪ್ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನಕಾರಿ ಕಾಮೆಂಟ್ಗಳನ್ನು ಮಾಡಿ ಮಾನಸಿಕವಾಗಿ ಹಿಂಸಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹಿಂದೆಯೂ ದೂರು ದಾಖಲು
ಈ ಹಿಂದೆ ಕಾರುಣ್ಯಾ ರಾಮ್ ಅವರು ಸಮೃದ್ಧಿ ರಾಮ್ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಲ್ಲಿ ಎನ್ಸಿಆರ್ (NCR) ದಾಖಲಾಗಿತ್ತು. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿಗೆ ದೂರು ನೀಡಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




