ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ – ಟ್ವೀಟ್ ಮೂಲಕ Nikhil Kumaraswamy ಮನವಿ.!

ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ, ಇದೀಗ ಕನ್ನಡ ಭಾಷೆಯನ್ನ ನಿರಾಕರಿಸಿ, ಮತ್ತೆ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಹೀಗಾಗಿ ನೈರುತ್ಯ ರೈಲ್ವೆ ಇಲಾಖೆಯ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕನ್ನಡಿಗ ಉದ್ಯೋಗಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕಳವಳ
ಈ ಕುರಿತು ಟ್ವೀಟ್ ಮಾಡಿರುವ Nikhil Kumaraswamy, ಕನ್ನಡಿಗ ಉದ್ಯೋಗಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ವಲಯದಲ್ಲಿ ಇಲಾಖಾ ಬಡ್ತಿ ಪರೀಕ್ಷೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಯುತ್ತಿವೆ. ಇದ್ರಿಂದ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿ ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಉದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ. ಅಲ್ದೇ ಆಗಸ್ಟ್ 2024ರಲ್ಲಿ ರೈಲ್ವೆ ಮಂಡಳಿ ಹೊರಡಿಸಿದ್ದ ಆದೇಶದಂತೆ, ಪ್ರಾದೇಶೀಕ ಭಾಷೆಗಳಲ್ಲಿಯೂ ಪರೀಕ್ಷೆ ನಡೆಸಲು ಅವಕಾಶವಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
READ THIS : ಶಿಥಿಲಾವಸ್ಥೆ ಕಟ್ಟಡಗಳ ಮಾಲೀಕರುಗಳಿಗೆ GBA ನೋಟೀಸ್!

ಎಲ್ಲಾ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗುವಂತೆ ಮನವಿ
ಇನ್ನು ಇಲಾಖಾ ಬಡ್ತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಲಭ್ಯವಾಗಬೇಕು. ಕೇವಲ ಭಾಷಾ ಕಾರಣಕ್ಕಾಗಿ ಅರ್ಹ ಕನ್ನಡಿಗ ಉದ್ಯೋಗಿಗಳು ಬಡ್ತಿಯಿಂದ ವಂಚಿತರಾಗಬಾರದು ಎಂದು ಆಗ್ರಹಿಸಿರುವ ನಿಖಿಲ್ ಕುಮಾರಸ್ವಾಮಿ, ರೈಲ್ವೆ ಇಲಾಖೆಯ ಮುಂದಿನ ಎಲ್ಲಾ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ.
Nikhil Kumaraswamy ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಸದ್ಯ ಈ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡಿಗ ಉದ್ಯೋಗಿಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

MUST WATCH : ಜಿಲ್ಲೆಗೆ HEMAVATHI ನೀರು ಬಿಡದಿದ್ರೆ ಉಪವಾಸ ಸತ್ಯಾಗ್ರಹ ಮಾಡೋದಾಗಿ SOGADU SHIVNNA ಎಚ್ಚರಿಕೆ..!




