ಕೋಲಾರ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಲೋಕಾಯುಕ್ತ Veerappa .

ಕೋಲಾರ ನಗರದಲ್ಲಿ ಸಾರ್ವಜನಿಕ ಸೇವೆಗಳ ಗುಣಮಟ್ಟ ಪರಿಶೀಲನೆಗಾಗಿ ಉಪಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಕೋಲಾರ KSRTC ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವಧಿ ಮೀರಿದ ಆಹಾರ
ಇನ್ನು ಪರಿಶೀಲನೆ ವೇಳೆ ಬಸ್ ನಿಲ್ದಾಣದ ಮಳಿಗೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು ಮಾರಾಟಕ್ಕೆ ಇಟ್ಟಿರುವುದು ಪತ್ತೆಯಾಗಿದ್ದು, ಇದಕ್ಕೆ ಉಪಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಕೆಲ ಮಳಿಗೆಗಳಲ್ಲಿ ತೂಕ ಹಾಕುವ ಯಂತ್ರಗಳು ಇಲ್ಲದಿರುವುದು ಹಾಗೂ ಅಗತ್ಯವಾದ ಲೈಸೆನ್ಸ್ಗಳಿಲ್ಲದೇ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.
ಇದನ್ನು ಓದಿ : ವಂಟಾರದಲ್ಲಿ ಕಳೆದುಹೋದ ಲಿಯೋನಲ್ ಮೆಸ್ಸಿ
ಅಧಿಕಾರಿಗಳಿಗೆ ತರಾಟೆ
ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಿ. ವೀರಪ್ಪ ಅವರು, ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಇಂತಹ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು. ಕೂಡಲೇ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ
ಇದೇ ವೇಳೆ ನಗರ ಹಾಗೂ ತಾಲೂಕು ಮಟ್ಟದಲ್ಲಿ ಬಸ್ ಸೌಲಭ್ಯಗಳು, ಪ್ರಯಾಣಿಕರಿಗೆ ಲಭ್ಯವಿರುವ ಮೂಲಭೂತ ಸೌಕರ್ಯಗಳ ಪರಿಶೀಲನೆಯನ್ನೂ Veerappa ನಡೆಸಿದರು. ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಪರಿಶೀಲನೆ ವೇಳೆ ನಗರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಲೋಕಾಯುಕ್ತ ಬಿ. ವೀರಪ್ಪ ಅವರಿಗೆ ಸಾಥ್ ನೀಡಿದರು.
ಇದನ್ನು ನೋಡಿ : ಹೆತ್ತ ತಂದೆ ತಾಯಿಯ ಹೊಡೆದು ಕೊಂದ ಮಗ




