ತಮಿಳುನಾಡಿನಲ್ಲಿ ಇನ್ನು ಮುಂದೆ ದಳಪತಿ Vijay ಅಬ್ಬರ ಶುರು!

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಹೊಸ ರಾಜಕೀಯ ಯುಗದ ಆರಂಭ
ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ಒಂದು ಹೊಸ ರಾಜಕೀಯ ಯುಗದ ಆರಂಭವಾಗಿದೆ. ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್ ರವಿ ಅವರು ವಿಜಯ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಅಭಿಮಾನಿಗಳ ನಡುವೆ ಪ್ರಮಾಣವಚನ ಸ್ವೀಕಾರ
ನೆಹರು ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳು ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ನಡೆದ ಈ ಸಮಾರಂಭ ರಾಜಕೀಯ ಹಾಗೂ ಸಿನಿರಂಗದ ಗಣ್ಯರನ್ನು ಒಂದೇ ವೇದಿಕೆಗೆ ತಂದಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಟಿ ತ್ರಿಶಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಘರ್ಷದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ
ಸಿನಿಮಾ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದ ವಿಜಯ್, ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಸ್ಥಾಪಿಸಿ ರಾಜಕೀಯ ಪ್ರವೇಶ ಮಾಡಿದ್ದರು. ಡಿಎಂಕೆ ಹಾಗೂ ಎಐಎಡಿಎಂಕೆಯಂತಹ ಬಲಿಷ್ಠ ಪಕ್ಷಗಳ ವಿರುದ್ಧ ಹೋರಾಡಿ ಜನಬೆಂಬಲದೊಂದಿಗೆ ರಾಜ್ಯದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಾರೆ. ಹಲವು ರಾಜಕೀಯ ಮತ್ತು ಕಾನೂನು ಸವಾಲುಗಳನ್ನು ಎದುರಿಸಿದ ಬಳಿಕ ಇದೀಗ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ.
READ THIS : ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಇನ್ನಿಲ್ಲ
ಒಂಬತ್ತು ಸಚಿವರ ಸಂಪುಟ
ಇನ್ನು ವಿಜಯ್ ಅವರೊಂದಿಗೆ ಒಂಬತ್ತು ಮಂದಿ ಸಚಿವರೂ ಪ್ರಮಾಣವಚನ ಸ್ವೀಕರಿಸಿದರು. ಸಚಿವ ಸಂಪುಟದಲ್ಲಿ ಎಸ್. ಕೀರ್ತನಾ, ಕೆ.ಎ. ಸೆಂಗೊಟ್ಟೈಯನ್, ಆಧವ್ ಅರ್ಜುನ್, ಬಸ್ಸಿ ಆನಂದ್, ಡಾ. ಅರುಣ್ ರಾಜ್, ವೆಂಕಟರಮಣನ್, ನಿರ್ಮಲ್ ಕುಮಾರ್, ರಾಜ್ ಮೋಹನ್ ಹಾಗೂ ಡಾ. ಟಿ.ಕೆ. ಪ್ರಭು ಸ್ಥಾನ ಪಡೆದಿದ್ದಾರೆ.

ಡಿಸಿಎಂ ಹುದ್ದೆ ಇಲ್ಲ
ಸರ್ಕಾರ ರಚನೆಗೆ ಮುನ್ನ ಉಪಮುಖ್ಯಮಂತ್ರಿ ಹುದ್ದೆ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದರೂ, ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ಮಾತ್ರ ಅಧಿಕಾರ ಸ್ವೀಕರಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಪ್ರಸ್ತುತ ಸರ್ಕಾರದಲ್ಲಿ ಯಾವುದೇ ಉಪಮುಖ್ಯಮಂತ್ರಿ ಹುದ್ದೆ ಇರುವುದಿಲ್ಲ ಎಂದು ಸ್ಪಷ್ಟವಾಗಿದೆ.
ಮೇ13 ರೊಳಗೆ ವಿಶ್ವಾಸಮತ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ವಿಜಯ್ ಅವರು ಮೇ 13ರೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಯುಗ ಆರಂಭವಾಗಿದ್ದು, ಜನರಲ್ಲಿ ಭಾರೀ ನಿರೀಕ್ಷೆಗಳು ಮೂಡಿವೆ.

MUST WATCH : ಸಚಿವ ಡಿ. ಸುಧಾಕರ್ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ




