ಚಿತ್ರದುರ್ಗ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು CM ಘೋಷಿಸಿದ್ದಾರೆ.

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಸಜೀವ (Sea Bird Bus Accident) ದಹನಗೊಂಡಿದ್ದು, ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಚಿತ್ರದುರ್ಗ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿಯ ದುರಂತದಲ್ಲಿ ಕೊನೆಗೊಂಡಿರುವುದು ಅತ್ಯಂತ ವಿಷಾದಕರ.”
ಇದನ್ನು ಓದಿ : ಇಬ್ಬರು ಮಕ್ಕಳನ್ನು ಕಾಲುವೆಗೆ ತಳ್ಳಿದ ಪಾಪಿ ತಂದೆ

ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು CM ಘೋಷಿಸಿದ್ದಾರೆ. ಅವರು ಅಧಿಕಾರಿಗಳನ್ನು ಸೂಚಿಸಿ, ಸಂತ್ರಸ್ತರ ನೆರವಿಗೆ ತಕ್ಷಣ ನಿಲ್ಲುವಂತೆ ಮಾಡಿರುವುದಾಗಿ ತಿಳಿಸಿದ್ದಾರೆ. ಇನ್ನು ಈ ಘಟನೆ ಕುರಿತು ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಸಿಎಂ ಅವರು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥನೆ ವ್ಯಕ್ತಪಡಿಸಿದ್ದಾರೆ.

ಇದನ್ನು ನೋಡಿ : DKS – RAJANNA ಭೇಟಿ ವಿಚಾರ K N RAJANNA ಶಾಕಿಂಗ್ ಹೇಳಿಕೆ




