Bitcoin ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್ಗೂ ಎದುರಾಗುತ್ತಾ ಸಂಕಷ್ಟ?

ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಿಟ್ಕಾಯಿನ್ ಹಗರಣದ ತನಿಖೆ ಇದೀಗ ಮಹತ್ವದ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಈ ಹಗರಣದ ಕಿಂಗ್ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ಗೂ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.
ಪ್ರಮುಖ ಅಂಶಗಳು
- ಬಿಟ್ಕಾಯಿನ್ ಹಗರಣದ ಕಿಂಗ್ಪಿನ್ ಶ್ರೀಕಿ ಸೇರಿ ಮೂವರ ಬಂಧನ
- ಶ್ರೀಕಿ ಬಂಧನದಿಂದ ಮೊಹಮ್ಮದ್ ನಲಪಾಡ್ಗೆ ಮತ್ತೆ ಸಂಕಷ್ಟದ ಭೀತಿ
- ಹಳೆ ನಂಟಿನ ದಾಖಲೆಗಳನ್ನು ಕಲೆಹಾಕುತ್ತಿರುವ ಇಡಿ
- ನಲಪಾಡ್ರನ್ನು ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ

ಶ್ರೀಕಿ – ನಲಪಾಡ್ ಸಂಪರ್ಕದ ಆರೋಪ
ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್ಸೈಟ್ ಹ್ಯಾಕ್ ಮಾಡಿ, ಸರ್ಕಾರದ ಹಣವನ್ನು ಅಕ್ರಮ ಖಾತೆಗಳಿಗೆ ವರ್ಗಾಯಿಸಿದ ಪ್ರಕರಣದಲ್ಲಿ ಶ್ರೀಕಿ ತಂಡದ ಪಾತ್ರದ ಬಗ್ಗೆ ಈಗಾಗಲೇ ತನಿಖೆ ನಡೆದಿತ್ತು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಎಸ್ಐಟಿ ತನಿಖೆಗೆ ಒಪ್ಪಿಸಿತ್ತು. ತನಿಖೆಯ ವೇಳೆ ಹಲವು ಡಿಜಿಟಲ್ ವ್ಯಾಲೆಟ್ಗಳ ಕಳ್ಳತನ ಬೆಳಕಿಗೆ ಬಂದಿದ್ದು, ನಲಪಾಡ್ ಸಂಪರ್ಕದ ಕುರಿತೂ ಕೆಲವು ಮಾಹಿತಿಗಳು ಪತ್ತೆಯಾಗಿದ್ದವು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಈಗಾಗಲೇ ಎರಡು ಬಾರಿ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು.
ಇದೀಗ ಇಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿರುವುದರಿಂದ, ಅಕ್ರಮ ಹಣ ವರ್ಗಾವಣೆ ಹಾಗೂ ಕ್ರಿಪ್ಟೋ ವ್ಯವಹಾರಗಳ ಕುರಿತಂತೆ ಮತ್ತಷ್ಟು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.
READ THIS : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬಿಸಿ.! ಗ್ರಾಹಕರು ಕಂಗಾಲು

ಹಳೆಯ ಹಗರಣದ ವಿವರ
ಏಪ್ರಿಲ್ 2024ರಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ಸುಮಾರು 15 ಗಂಟೆಗಳ ಕಾಲ ದಾಳಿ ನಡೆಸಿದ್ದರು. ಶ್ರೀಕಿ ಹ್ಯಾಕ್ ಮಾಡಿದ Bitcoin ಗಳನ್ನು ಕ್ರಿಪ್ಟೋ ಮೂಲಕ ಹಣವಾಗಿ ಪರಿವರ್ತಿಸಿ, ‘ಲೇಯರಿಂಗ್’ ವಿಧಾನದಲ್ಲಿ ವರ್ಗಾವಣೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.
ಶ್ರೀಕಿ ಮತ್ತು ನಲಪಾಡ್ ಸಹೋದರ ಉಮರ್ ನಲಪಾಡ್ ಸಹಪಾಠಿಗಳಾಗಿದ್ದರಿಂದ ಅವರ ಸ್ನೇಹ ಆರಂಭವಾಗಿತ್ತು ಎನ್ನಲಾಗಿದೆ. ಇದೇ ವೇಳೆ ಮುಂಬೈ ಮೂಲದ ವ್ಯಕ್ತಿಯೊಬ್ಬರ ಮೂಲಕ ನಲಪಾಡ್ ಖಾತೆಗೆ 10 ಲಕ್ಷ ರೂ. ವರ್ಗಾವಣೆಯ ಆರೋಪವೂ ಕೇಳಿಬಂದಿತ್ತು. ಒಟ್ಟು 4.5 ಕೋಟಿ ರೂ. ಅಕ್ರಮ ವಹಿವಾಟಿನ ಶಂಕೆ ತನಿಖೆಯಲ್ಲಿ ಉಲ್ಲೇಖವಾಗಿತ್ತು.

ನಲಪಾಡ್ ಪಾಲಿಗೆ ಕಂಟಕ
ಹಿಂದಿನ ದಾಳಿ ಮತ್ತು ಎಸ್ಐಟಿ ನೀಡಿದ್ದ ಮಾಹಿತಿಗಳ ಆಧಾರದ ಮೇಲೆ ಇಡಿ ಈಗ ಶ್ರೀಕಿಯನ್ನು ವಶಕ್ಕೆ ಪಡೆದಿದೆ. ಶ್ರೀಕಿ ನೀಡುವ ಹೇಳಿಕೆಗಳು ನಲಪಾಡ್ ಪಾಲಿಗೆ ಕಂಟಕವಾಗುವ ಸಾಧ್ಯತೆಯಿದೆ.
MUST WATCH : TUMAKURU ಜಿಲ್ಲೆಯಲ್ಲಿ H5N1 ಅಟ್ಟಹಾಸ.? – ಒಂದಲ್ಲ, ಎರಡಲ್ಲ ಬರೋಬ್ಬರಿ 54 ನವಿಲುಗಳು ಸಾ*





