Sira : ಖಾಸಗಿ ಬಸ್ – ಲಾರಿ ನಡುವೆ ಅಪಘಾತ

ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ Sira ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಸ್ಸಿನ ಮುಂಭಾಗ ಸಂಪೂರ್ಣ ಜಖಂ
ಬೆಂಗಳೂರಿನ ಕಡೆಗೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು,ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
READ THIS : ನಿರ್ಣಾಯಕ ಹಂತಕ್ಕೂ ಮುನ್ನ ಮಾಲ್ಡೀವ್ಸ್ಗೆ ಹಾರಿದ RCB ಪಡೆ..!

ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಧಾವಿಸಿ ಬಸ್ಸಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ರಕ್ಷಣಾ ಕಾರ್ಯ ನಡೆಸಿದರು. ನಂತರ ಅವರನ್ನು ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಈ ಅಪಘಾತದಲ್ಲಿ ಗಾಯಗೊಂಡ ಗಾಯಾಳು ಚೇತನ್ ಹಾಗೂ ಬಸ್ ಚಾಲಕ ಕಾಶಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
Sira – ಕೆಲಕಾಲ ಸಂಚಾರ ಅಸ್ತವ್ಯಸ್ಥ
ಇನ್ನು ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ಥವಾಗಿತ್ತು. ವಿಷಯ ತಿಳಿದ ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.

MUST WATCH : ಅಳಿಯನ ಜೊತೆ ಅತ್ತೆ ಲವ್ವಿ ಡವ್ವಿ – ಓಡಿಹೋಗಿದ್ದಕ್ಕೆ ಗಂಡ ಸೂಸೈ*




