ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭೀಕರ Murder ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ರೈಲ್ವೆ ಸ್ಟೇಷನ್ ರಸ್ತೆಯ ಚಾಪಲಗಡ್ಡ ಪ್ರದೇಶದ ಮನೆಯ ಮಹಡಿಯ ಮೇಲೆ 28 ವರ್ಷದ ವಿವಾಹಿತ ಮಹಿಳೆ ಉಮಾ ಎಂಬವರು ಕತ್ತು ಕೊಯ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೂರು ಮಕ್ಕಳ ತಾಯಿ ಹೆಣವಾಗಿದ್ದೇಗೆ?
ಮೃತ ಉಮಾ ಅವರು ಕಳೆದ ಆರು ವರ್ಷಗಳಿಂದ ಗಂಡ ರಘುಮೂರ್ತಿ ಅವರಿಂದ ದೂರವಿದ್ದು, ಮೂರು ಮಕ್ಕಳೊಂದಿಗೆ ಚಾಪಲಗಡ್ಡ ಪ್ರದೇಶದ ಮನೆಯಲ್ಲಿ ವಾಸಿಸುತ್ತಿದ್ದರು. ಇನ್ನು ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ
ಹಲ್ಲೆ ನಡೆಸಿ ಕತ್ತು ಕೊಯ್ದು Murder
ಪ್ರಾಥಮಿಕ ಮಾಹಿತಿ ಪ್ರಕಾರ, ಉಮಾ ಅವರನ್ನು ತೀವ್ರವಾಗಿ ಹಲ್ಲೆ ನಡೆಸಿ ಕತ್ತು ಕೊಯ್ದು Murder ಮಾಡಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಪೊಲೀಸರು ಭೇಟಿ ನೀಡಿ ಪರಿಶೀಲನೆ
ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ್ ಹಾಗೂ ಹೊಸಪೇಟೆ ಡಿವೈಎಸ್ಪಿ ಡಾ. ಮಂಜುನಾಥ್ ತಳವಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : TUMAKURU | ಅಶ್ಲೀಲ ORCHESTRA ಕರ್ಮಕಾಂಡ – ಮಕ್ಕಳನ್ನ ಟಾರ್ಗೆಟ್ ಮಾಡಿದ್ರೆ ಬೀಳುತ್ತೆ CASE




