ಚಾಕೋಲೆಟ್ ನೀಡಿ ಲೈಂಗಿಕ ದೌರ್ಜನ್ಯ – Hassana ದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

Hassana ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯೊಂದರ ಬಸ್ ಚಾಲಕನಾಗಿದ್ದ ರಂಜಿತ್ ಎಂಬಾತ, ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಚಾಕೋಲೆಟ್ ನೀಡುವ ನೆಪದಲ್ಲಿ ನಿತ್ಯ ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ, ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ
ಬಾಲಕಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕಳೆದ ಸುಮಾರು 8 ತಿಂಗಳಿನಿಂದ ಆರೋಪಿಯು ದೌರ್ಜನ್ಯ ನಡೆಸುತ್ತಿದ್ದನೆಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಬಾಲಕಿಯನ್ನು ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಹೊಸ ವರ್ಷದ ಮೊದಲ ದಿನ ತಪ್ಪದೇ ಈ ಕೆಲಸ ಮಾಡಿ
ಆರೋಪಿ ಬಂಧನ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ನವಜಾತ ಶಿಶುವಿಗೆ ಅಗತ್ಯ ಆರೈಕೆ
ಇನ್ನು ಬಾಲಕಿ ಹಾಗೂ ನವಜಾತ ಶಿಶುವಿಗೆ ಅಗತ್ಯ ಆರೈಕೆ ನೀಡಲಾಗುತ್ತಿದ್ದು, ಕೆಲ ದಿನಗಳ ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಹಾಸನ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ತಿಳಿಸಿದ್ದಾರೆ.
ಇದನ್ನು ನೋಡಿ : ಸುದೀಪ್ ಆಪ್ತ ವಿನಯ್ ಗೌಡ vs ದರ್ಶನ್ ಆಪ್ತ ಧನ್ವಿರ್ ಗೌಡ..! ಉರಿಯುವ ಬೆಂಕಿಗೆ ತುಪ್ಪ ಸುರಿದ್ರಾ?




