ಕನ್ನಡ ನಟಿ Shubha Poonja ತಮ್ಮ ವಿಚ್ಛೇದನ ವದಂತಿಗಳ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡ ಚಿತ್ರರಂಗದ ನಟಿ Shubha Poonja ತಮ್ಮ ದಾಂಪತ್ಯ ಜೀವನದ ಬಗ್ಗೆ ಹರಿದಾಡುತ್ತಿರುವ ವಿಚ್ಛೇದನ ವದಂತಿಗಳಿಗೆ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಅವರ ವೈಯಕ್ತಿಕ ಬದುಕಿನ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ನಟಿ ಈ ವಿಚಾರವಾಗಿ ಮೌನ ಮುರಿದಿದ್ದಾರೆ.

ಶುಭಾ ಪೂಂಜಾ ಅವರು 2022ರಲ್ಲಿ ತಮ್ಮ ಗೆಳೆಯ ಸುಮಂತ್ ಬಿಲ್ಲವ್ ಅವರನ್ನು ವಿವಾಹವಾಗಿದ್ದರು.
ಆದರೆ ಇತ್ತೀಚಿನ ದಿನಗಳಲ್ಲಿ ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿತ್ತು.
ಇದೇ ವೇಳೆ, ಪತಿಯೊಂದಿಗೆ ಇದ್ದ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಿರುವುದು ಕೂಡ ಈ ವದಂತಿಗಳಿಗೆ ಮತ್ತಷ್ಟು ಬಲ ನೀಡಿತ್ತು.
MUST READ : Gold & Silver Rate : 10 ಜೂನ್ 2026 ಚಿನ್ನದ ಬೆಲೆ ಭಾರೀ ಇಳಿಕೆ..!

ಆದರೆ, ವಿಚ್ಛೇದನದ ಬಗ್ಗೆ ನೇರವಾಗಿ ಹೌದು ಅಥವಾ ಇಲ್ಲ ಎಂದು ಹೇಳದ ಶುಭಾ ಪೂಂಜಾ, ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮ ಮಿತ್ರರು ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ತಮ್ಮ ಹಾಗೂ ಪತಿ ಸುಮಂತ್ ಮತ್ತು ಕುಟುಂಬದವರಿಗೆ ಖಾಸಗಿತನ ಅತ್ಯಂತ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, “ನನ್ನ ಚಿತ್ರಜೀವನದ ಪಯಣದಲ್ಲಿ ನೀವು ನೀಡಿದ ಪ್ರೀತಿ, ಬೆಂಬಲ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಕೃತಜ್ಞಳು. ಈ ಸಂದರ್ಭದಲ್ಲಿ ನನಗೆ, ಸುಮಂತ್ ಹಾಗೂ ನಮ್ಮ ಕುಟುಂಬದವರಿಗೆ ವೈಯಕ್ತಿಕ ಜೀವನದಲ್ಲಿ ಸ್ವಲ್ಪ ಖಾಸಗಿತನ ನೀಡುವಂತೆ ವಿನಮ್ರವಾಗಿ ಕೇಳಿಕೊಳ್ಳುತ್ತೇನೆ.
ಈ ಕಠಿಣ ಸಮಯದಲ್ಲಿ ನಿಮ್ಮ ಗೌರವ ಮತ್ತು ತಿಳುವಳಿಕೆ ನಮಗೆ ಬಹಳ ಮುಖ್ಯ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ, “ಸೂಕ್ತ ಸಮಯ ಬಂದಾಗ ಯಾವುದೇ ಮಾಹಿತಿ ಅಥವಾ ಅಪ್ಡೇಟ್ ಇದ್ದರೆ ನಾನೇ ವೈಯಕ್ತಿಕವಾಗಿ ಹಂಚಿಕೊಳ್ಳುತ್ತೇನೆ.
ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಶುಭಾ ಪೂಂಜಾ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಬದಲಾವಣೆಗಳು ನಡೆಯುತ್ತಿರುವುದನ್ನು ಪರೋಕ್ಷವಾಗಿ ಸೂಚಿಸಿದಂತಿದೆ.
ಆದರೆ, ವಿಚ್ಛೇದನದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ನೀಡದಿರುವ ಕಾರಣ, ಊಹಾಪೋಹಗಳಿಗೆ ಸದ್ಯಕ್ಕೆ ವಿರಾಮ ನೀಡುವಂತೆ ಅವರು ಮನವಿ ಮಾಡಿದ್ದಾರೆ.
MUST WATCH : ಸರ್ಕಾರಿ ಶಾಲೆ ಮುಚ್ಚೋಕೆ ಪ್ಲಾನ್ ಬಿಇಒ ಕಚೇರಿ ಮುಂಭಾಗ ಪ್ರತಿಭಟನೆ

