ಜಾತಿ ನಿಂದನೆ ಪ್ರಕರಣದಲ್ಲಿ ಹಾಜರಾಗದ ಹಿನ್ನೆಲೆ ಶಾಸಕ BP Harish ಬಂಧನಕ್ಕೆ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಸಿದೆ.

ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಶಾಸಕ B. P. Harish ಅವರ ಬಂಧನಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಸಿದೆ. ಈ ಸಂಬಂಧ ನ್ಯಾಯಮೂರ್ತಿ Santosh Gajanan Bhat ಅವರು ಆದೇಶ ನೀಡಿದ್ದಾರೆ.
ಇದೇ ಮೇ 7ರಂದು ಶಾಸಕರನ್ನು ಕೋರ್ಟ್ಗೆ ಹಾಜರುಪಡಿಸುವಂತೆ Harihar Town Police Station ಠಾಣಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ.
MUST READ : Bangalore : ಮೇ 10ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ..!!

2023ರ ವಿಧಾನಸಭಾ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಶಾಸಕ ಹರೀಶ್ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಬಿಎಸ್ಪಿ ಮುಖಂಡ Hanumanthappa ಅವರು ಹರಿಹರ ನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.
ಹೈಕೋರ್ಟ್ ಆದೇಶ ಬಂದ ಹಿನ್ನೆಲೆ ಹರಿಹರ ನಗರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಬಂಧನ ಪ್ರಕ್ರಿಯೆ ಚುರುಕುಗೊಂಡಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ನ್ಯಾಯಾಲಯ ಕ್ರಮಗಳತ್ತ ಎಲ್ಲರ ಗಮನ ಸೆಳೆಯುತ್ತಿದೆ.
MUST WATCH : BENGALURU ಪೊಲೀಸರ ಭರ್ಜರಿ ಕಾರ್ಯಾಚರಣೆ – 9 ಕೋಟಿ ಮೌಲ್ಯದ DRUG SEIZE, ನಾಲ್ವರು ಅಂದರ್ | BENGALURU NEWS |




