Mysore ನಲ್ಲಿ ಮರ್ಯಾದೆ ಕೊಡಲಿಲ್ಲ ಎಂದು ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಪತಿ!

ಕ್ಷುಲ್ಲಕ ಕಾರಣಕ್ಕೆ ಸಂಬಂಧದ ನಡುವೆ ಕೊಲೆಗಳು ನಡೆಯುವುದು ಹೆಚ್ಚುತ್ತಿದೆ. ಇದೂ ಅಂಥದೇ ಇನ್ನೊಂದು ಪ್ರಕರಣ. ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ Mysore ನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರೂ ಸಾಥ್ ನೀಡಿದ್ದು, ಮಾಹಿತಿ ತಿಳಿದ ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಂಡತಿಯ ಕೊಲೆಗೆ 5 ಲಕ್ಷ ರೂ. ಸುಪಾರಿ
ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್ಗೆ ಹಣ ನೀಡುತ್ತಿರಲಿಲ್ಲ.
ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.
ಇದನ್ನು ಓದಿ : ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಅಧಿಕಾರಿ

ಹೆಂಡ್ತಿ ಕೊಲ್ಲಲು ಸುಪಾರಿ ಕೊಟ್ಟ ಪತಿರಾಯ!
ಪತ್ನಿಯನ್ನು ಕೊಲೆ ಮಾಡುವ ಉದ್ದೇಶದಿಂದ ಮಹೇಶ್, ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಘಟನೆಗೆ ಅಗ್ನಿ ಅವಘಡದ ರೂಪ ನೀಡುವಂತೆ ಪ್ಲಾನ್ ರೂಪಿಸಿದ್ದ.
ಈ ಪ್ಲಾನ್ನಂತೆ ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ್ ಎಂಬವರು, ನಾಗರತ್ನ ಒಬ್ಬರೇ ಇರುವ ಸಮಯದಲ್ಲಿ ಮನೆಗೆ ನುಗ್ಗಿದ್ದಾರೆ.
ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಯತ್ನ
ಇನ್ನು ಆರೋಪಿಗಳು ಮನೆಗೆ ನುಗ್ಗಿ ಮಹಿಳೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಯತ್ನ ನಡೆಸಿದ್ದಾರೆ. ಬಳಿಕ ಗ್ಯಾಸ್ ಸಿಲಿಂಡರ್ಗಳನ್ನು ಸೋರಿಕೆ ಮಾಡಿ ಬೆಂಕಿ ಹಚ್ಚಿ, ಪ್ರಕರಣವನ್ನು ಅಪಘಾತವೆಂದು ತೋರಿಸಲು ಯತ್ನಿಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ.

ದೂರು ದಾಖಲು
ಘಟನೆಯಲ್ಲಿ ಗಾಯಗೊಂಡ ನಾಗರತ್ನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತನಿಖೆಯಲ್ಲಿ ಗಂಡನೇ ಹೆಂಡತಿಯನ್ನು ಕೊಲ್ಲುವಂತೆ ಸುಪಾರಿ ನೀಡಿದ್ದು ಬೆಳಕಿಗೆ ಬಂದಿದೆ.
ಇನ್ನು ಈ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಇದನ್ನು ನೋಡಿ : BPL CARDದಾರರು ಇನ್ನು ಮುಂದೆ ಚಿಂತೆ ಪಡುವ ಆಗಿಲ್ಲ- ಯಾಕೆ ಗೊತ್ತಾ..?




