ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ದುರಂತ – ಟೊಮೆಟೊ ಬಾತ್ ತಿಂದು 15 ಮಕ್ಕಳು ಅಸ್ವಸ್ಥ

ಬೆಳಗಿನ ಉಪಹಾರ ಸೇವಿಸಿದ ಬಳಿಕ ವಸತಿ ಶಾಲೆಯ ಸುಮಾರು 15 ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ನಡೆದಿದೆ.
ಟೊಮೆಟೊ ಬಾತ್ ತಿಂದು ಹೊಟ್ಟೆ ನೋವು
ಶಾಲೆಯಲ್ಲಿ ಬೆಳಗಿನ ಉಪಹಾರವಾಗಿ ಟೊಮೆಟೊ ಬಾತ್ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನೋವು ತೀವ್ರವಾಗುತ್ತಿದ್ದಂತೆ ಸುಮಾರು 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳು ತೀವ್ರ ಹೊಟ್ಟೆ ನೋವಿನಿಂದ ಬಳಲಿದ್ದು, ತಕ್ಷಣ ಶಾಲಾ ಸಿಬ್ಬಂದಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಅವರನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
READ THIS : ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ
ಬಳಿಕ ವಿದ್ಯಾರ್ಥಿಗಳನ್ನು ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತಾಲೂಕು ಆರೋಗ್ಯಾಧಿಕಾರಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಇನ್ನು ಹೆಚ್ಚಿನ ಚಿಕಿತ್ಸೆ ಚಿಕಿತ್ಸೆಗಾಗಿ ಮೂವರು ವಿದ್ಯಾರ್ಥಿಗಳನ್ನು ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನುಳಿದ ವಿದ್ಯಾರ್ಥಿಗಳಿಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಗೆ ಅಧಿಕಾರಿಗಳು ಭೇಟಿ, ಮಕ್ಕಳ ಆರೋಗ್ಯ ವಿಚಾರಣೆ
ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ತಾಲೂಕು ಪಂಚಾಯಿತಿ ಅನಂತ್ ರಾಜ್, ಮಾಜಿ ಬೆಸ್ಕಾಂ ನಿರ್ದೇಶಕ ವಸಂತ್ ಕುಮಾರ್, ಬಿಇಒ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ನಾಯಕ್ ಸೇರಿದಂತೆ ಹಲವು ಅಧಿಕಾರಿಗಳು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
MUST WATCH : ಅಹಿಂದ ಹೆಸ್ರಲ್ಲಿ ಮತ ಪಡೆದು CONGRESS ದೊಡ್ಡ ಅನ್ಯಾಯ ಮಾಡ್ತಿದೆ !





