School ವ್ಯಾನ್ ಹರಿದು 2 ವರ್ಷದ ಮಗು ದುರ್ಮರಣ

ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದಿದ್ದ ಶಾಲಾ ವಾಹನ ಹರಿದು ಎರಡು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲ್ಲಿಕೇರಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಹುಲ್ಲಿಕೇರಿ ಗ್ರಾಮದ ಲುಕ್ಮಾನ್ ಬೋಗೂರ ಎಂದು ಗುರುತಿಸಲಾಗಿದೆ.
ರಸ್ತೆ ಬದಿ ನಿಂತಿದ್ದ ಮಗುವಿನ ಮೇಲೆ ಹರಿದ School ವ್ಯಾನ್.!
ಮಂಗಳವಾರ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲಾ ವಾಹನ ಹುಲ್ಲಿಕೇರಿ ಗ್ರಾಮಕ್ಕೆ ಬಂದಿತ್ತು ಎನ್ನಲಾಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ವರ್ಷದ ಲುಕ್ಮಾನ್ ಮೇಲೆ ವಾಹನ ಹರಿದು ಹೋಗಿದೆ ಎಂದು ಹೇಳಲಾಗಿದೆ.
ಇನ್ನು ಮಗುವಿನ ಮೇಲೆ ವಾಹನ ಹರಿದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮಗು ಮೃತಪಟ್ಟಿದ್ದು, ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಶಿರಾ ಜೆಡಿಎಸ್ನಲ್ಲಿ ‘ಮನೆಯೊಂದು ಮೂರು ಬಾಗಿಲು’

ಅಳ್ನಾವರ ಪೊಲೀಸರಿಂದ ತನಿಖೆ ಆರಂಭ
ಸದ್ಯ ಈ ಘಟನೆ ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪಘಾತದ ಕುರಿತು ತನಿಖೆ ಮುಂದುವರಿಸಿದ್ದಾರೆ.
MUST WATCH : ಹಸುಗೂಸನ್ನ ಬಾವಿಗೆ ಬಿಸಾಡಿ ಡ್ರಾಮಾ – ಮಗು ಕೊಂ* ದೇವರ ಮೇಲೆ ಕಥೆ ಕಟ್ಟಿದ್ರಾ.?




