5 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ – ಕುತ್ತಿಗೆ, ಕೈಗೆ ಗಾಯ

ದೇವಸ್ಥಾನದ ಬಳಿ ತೆರಳುತ್ತಿದ್ದ 5 ವರ್ಷದ ಬಾಲಕನ ಮೇಲೆ ಏಳೆಂಟು ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೋಗಿಹಳ್ಳಿಯಲ್ಲಿ ನಡೆದಿದೆ.
ಇದನ್ನು ಓದಿ : ಮಿತಿ ಮೀರಿದ ನಾಯಿ ಕಡಿತ ಪ್ರಕರಣ | Police Head Constable ಮೇಲೆ ಎರಗಿದ ಶ್ವಾನ

5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್!
ಆಂಜನೇಯಸ್ವಾಮಿ ದೇವಸ್ಥಾನದ ಸಮೀಪ ಬಾಲಕ ನಡೆದುಕೊಂಡು ಹೋಗ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿ ಕುತ್ತಿಗೆಗೆ ಬಾಯಿ ಹಾಕಿವೆ. ಕೂಡಲೇ ಸ್ಥಳದಲ್ಲಿ ವಾಕಿಂಗ್ ಮಾಡತ್ತಿದ್ದವರು ಬಾಲಕನ ರಕ್ಷಣೆ ಮಾಡಿದ್ದಾರೆ. ಇನ್ನು ಬೀದಿನಾಯಿಗಳ ದಾಳಿಯಿಂದಾಗಿ ಬಾಲಕನ ಕುತ್ತಿಗೆ, ಕೈ ಹಾಗೂ ಬೆನ್ನಿನ ಭಾಗಕ್ಕೆ ಗಾಯಾಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯ
ದಿನೇ ದಿನೇ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಇದನ್ನು ನೋಡಿ : ಸರ್ಕಾರಕ್ಕೆ ಇಕ್ಕಟಾದ BIDADI TOWNSHIP – ಬಿಡದಿ ಅಖಾಡಕ್ಕೆ ಇದೀಗ BJP ENTRY




