Bengaluru : ಬಾಗಲೂರು ಬಳಿ ಕಾಂಪೌಂಡ್ ಗೋಡೆ ಕುಸಿದು 5 ವರ್ಷದ ಬಾಲಕ ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ.

ರಾಜಧಾನಿ Bengaluru ನಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ.
ಮೃತ ಬಾಲಕನನ್ನು ಯಾದಗಿರಿ ಮೂಲದ ದಾವಲಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಮನ್ವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಹೊಸ ಉದ್ಯೋಗದ ಹುಡುಕಾಟದಲ್ಲಿದ್ದ ದಾವಲಸಾಬ್ ಅವರ ಪತ್ನಿ ಮತ್ತು ಮಗ ಅಫೀನ್ ಐದು ದಿನಗಳ ಹಿಂದಷ್ಟೇ ಬಾಗಲೂರಿನ ಬಂಡಿಕೊಡಿಗೆಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು.
MUST READ : Guru Pushya Mahayoga : ಈ 6 ರಾಶಿಗಳಿಗೆ ಅದೃಷ್ಟ, ಧನಲಾಭ ಮತ್ತು ಯಶಸ್ಸಿನ ಸುರಿಮಳೆ..!!

ಬುಧವಾರ ಸಂಜೆ ಅಫೀನ್ ಹಾಗೂ ಇತರ ಮಕ್ಕಳು ಮನೆಯ ಸಮೀಪ ಆಟವಾಡುತ್ತಿದ್ದರು. ಈ ವೇಳೆ ಕಬ್ಬಿಣದ ಗೇಟ್ ಹಿಡಿದು ಜೂಲಾಡುತ್ತಿದ್ದಾಗ, ದುರ್ಬಲವಾಗಿದ್ದ ಕಾಂಪೌಂಡ್ ಗೋಡೆ ಗೇಟ್ ಸಮೇತ ಮಕ್ಕಳ ಮೇಲೆ ಕುಸಿದು ಬಿದ್ದಿದೆ.
ಸ್ಥಳೀಯರು ತಕ್ಷಣ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ, ತಲೆ ಮತ್ತು ಎದೆಗೆ ತೀವ್ರ ಗಾಯವಾಗಿದ್ದ ಅಫೀನ್ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಸಮನ್ವಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕಾಂಪೌಂಡ್ ಗೋಡೆ ಕುಸಿತದ ಘಟನೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ದುರ್ಬಲ ಕಟ್ಟಡಗಳು ಮತ್ತು ಗೋಡೆಗಳ ಸುರಕ್ಷತೆ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
MUST WATCH : ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು – HIGHWAY ತಡೆದು ಅನ್ನದಾತರ ಆಕ್ರೋಶ.! | CHIKKABALLAPURA NEWS |




