Kolar : ಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ Murder

ಹೊಲಕ್ಕೆ ಹಸುಗಳಿಗೆ ಮೇವು ತರಲು ತೆರಳಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಾರಾಯಣಮ್ಮ (70) ಕೊಲೆಯಾದ ವೃದ್ದೆ.
ವೃದ್ದೆ ಮೇಲೆ ಅತ್ಯಾಚಾರ ಮಾಡಿ ಕೊಲೆ
ಈ ದುರ್ಘಟನೆ ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಕರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರತಿದಿನದಂತೆ ಹಸುಗಳಿಗೆ ಮೇವು ತರಲು ವೃದ್ಧೆ ಹೊಲಕ್ಕೆ ತೆರಳಿದ್ದರು. ಇದೇ ವೇಳೆ ದುಷ್ಕರ್ಮಿಗಳು ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಇದನ್ನು ಓದಿ : ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ – ಕತ್ತು ಸೀಳಿ ಬರ್ಬರವಾಗಿ Murder

Murder – ಪೊಲೀಸರು ಭೇಟಿ ನೀಡಿ ಪರಿಶೀಲನೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಸ್ಥಳದಲ್ಲಿದ್ದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನು ನೋಡಿ : ತುಮಕೂರಿನಲ್ಲಿ SIR ಪ್ರಕ್ರಿಯೆ ಹೇಗೆ ಆಗ್ತಿದೆ? – ಶಾಸಕ JYOTHI GANESH SIR ಬಗ್ಗೆ ಏನಂದ್ರು?




