ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆ : ತಾಯಿ, ಮಗ ಸಾವು.

ಗ್ಯಾಸ್ ಗೀಸರ್ನಿಂದ ಸಂಭವಿಸಿದ ಸೋರಿಕೆಯಿಂದ ತಾಯಿ ಹಾಗೂ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26) ಹಾಗೂ ಅವರ ನಾಲ್ಕು ವರ್ಷದ ಮಗ ಯುವಿ ಎಂದು ಗುರುತಿಸಲಾಗಿದೆ.
ಸ್ನಾನಕ್ಕೆ ಹೋದವಳು ಬಾತ್ರೂಂನಲ್ಲಿ ಬಲಿ!
ನೆನ್ನೆ ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆ (Gas Geyser Leak) ಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನು ಓದಿ : ಹೆತ್ತ ತಾಯಿಯನ್ನೇ ಅತ್ಯಾಚಾರ ಮಾಡಿದ ಮಗನಿಗೆ ಜೀವಾವಧಿ ಶಿಕ್ಷೆ..!

ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಲಿಲ್ಲ
ಪ್ರತಿದಿನ 4 ಗಂಟೆಗೆ ದೊಡ್ಡ ಮಗಳನ್ನು ಶಾಲೆಯಿಂದ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯಿಂದ ಚಾಂದಿನಿ ಪತಿ ಕಿರಣ್ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.
ಪ್ರಕರಣ ದಾಖಲು
ತಕ್ಷಣ ಮನೆಗೆ ಬಂದ ಪ್ರವೀಣ್ ಬಾತ್ರೂಮ್ನಲ್ಲಿ ತಾಯಿ–ಮಗುವನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ರು. ಪ್ರಾಥಮಿಕ ತನಿಖೆಯಲ್ಲಿ Gas Geyser Leak ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಪಾಪಿ – ದೇವಸ್ಥಾನದಲ್ಲಿ ಕಿರಾತಕನಿಂದ ಇದೆಂಥಾ ಕೃತ್ಯ!




