Belagavi : CM ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.

ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಖಾದಿ ಪರಂಪರೆಯ ಮಹತ್ವ ಮತ್ತು ದೇಶಾಭಿಮಾನವನ್ನು ಪ್ರತಿಬಿಂಬಿಸುವ ಈ ವಿಶಾಲ ಧ್ವಜದ ಅನಾವರಣದ ಕಾರ್ಯಕ್ರಮ ಭವ್ಯವಾಗಿ ಜರುಗಿತು.
ಇದನ್ನು ಓದಿ : ಅಕ್ರಮ ಸಂಬಂಧಕ್ಕೆ ಮಹಿಳೆಯ ಬರ್ಬರ ಹತ್ಯೆ, ಆರೋಪಿ ಬಂಧನ

ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗಿ
ಕಾರ್ಯಕ್ರಮದಲ್ಲಿ ವಿಧಾನಸಭಾ ಸಚಿವೆ ಯು.ಟಿ. ಖಾದರ್ ಫರೀದ್, CM ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಅನೇಕ ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.

ಇದನ್ನು ನೋಡಿ : ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ. – ಐಟಿ ವಲಯಕ್ಕೆ ಡಿಸಿಎಂ ಗುಡ್ನ್ಯೂಸ್




