Josh Hazlewood : ಆ್ಯಶಸ್ ಸರಣಿಯಿಂದ ಪ್ರಮುಖ ವೇಗಿ ಔಟ್; ಅಡಿಲೇಡ್ ಟೆಸ್ಟ್ಗೆ ಮರಳಲಿದ ಪ್ಯಾಟ್ ಕಮ್ಮಿನ್ಸ್.

ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹೇಝಲ್ವುಡ್ ಗಾಯದ ಕಾರಣದಿಂದಗಿ ಸರಣಿಯಿಂದ ಹೊರಗುಳಿದಿದ್ದಾರೆ. ಸ್ನಾಯು ಸೆಳೆತ ಮತ್ತು ಅಕಿಲೀಸ್ ಗಾಯದಿಂದ ಬಳಲುತ್ತಿರುವ Josh Hazlewood ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಹೆಚ್ಚಿನ ಸಮಯ ಬೇಕಾಗಿದೆ.
ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸದ ಅವರು, ಮೂರನೇ ಪಂದ್ಯದಲ್ಲಿ ತಂಡಕ್ಕೆ ಮರಳುವ ನಿರೀಕ್ಷೆಯಲ್ಲಿದ್ದರು. ಆದರೆ ಗಾಯದ ತೀವ್ರತೆಯಿಂದ ಮುಂದಿನ ಮೂರು ಪಂದ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.
ಪ್ಯಾಟ್ ಕಮಿನ್ಸ್ Full Fit
ಇದರೊಂದಿಗೆ, ಬೆನ್ನು ನೋವಿನಿಂದ ಮೊದಲ ಎರಡು ಪಂದ್ಯಗಳಿಗೆ ಲಭ್ಯವಾಗದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್ ಆಗಿದ್ದು, ಮೂರನೇ ಟೆಸ್ಟ್ನಲ್ಲಿ ಅಡಿಲೇಡ್ನಲ್ಲಿ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಮೊದಲು ನಾಯಕನಾಗಿ ಆಟವಾಡಿದ್ದ ಸ್ಟೀವ್ ಸ್ಮಿತ್ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಇದನ್ನು ಓದಿ : ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ CM

ಸರಣಿ ಸ್ಥಿತಿ
ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಪ್ರದರ್ಶನ ತೋರಿಸಿದೆ. ಪರ್ಥ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ 8 ವಿಕೆಟ್ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ, ದ್ವಿತೀಯ ಪಂದ್ಯದಲ್ಲೂ 8 ವಿಕೆಟ್ಗಳ ಜಯ ದಾಖಲಿಸಿ, 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಟೆಸ್ಟ್ಗೆ ಮರಳಲಿದ ಪ್ಯಾಟ್ ಕಮ್ಮಿನ್ಸ್
ಮುಂದಿನ ಮೂರನೇ ಟೆಸ್ಟ್ ಪಂದ್ಯ ಅಡಿಲೇಡ್ನಲ್ಲಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಈ ಪಂದ್ಯವು ಇಂಗ್ಲೆಂಡ್ಗೆ ನಿರ್ಣಾಯಕ, ಏಕೆಂದರೆ ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಜೀವಂತ ಹೋರಾಟವನ್ನು ಮುಂದುವರಿಸಲು ಇಂಗ್ಲೆಂಡ್ ಗೆಲುವು ಸಾಧಿಸಬೇಕು.
ಮೂರನೇ ಟೆಸ್ಟ್ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದರೆ, 3-0 ಅಂತರದಿಂದ ಸರಣಿ ಆಸೀಸ್ ಪಡೆ ಪಾಲಾಗಲಿದೆ. ಹೀಗಾಗಿ ಅಡಿಲೇಡ್ ಟೆಸ್ಟ್ ಪಂದ್ಯವು ಇಂಗ್ಲೆಂಡ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಇದನ್ನು ನೋಡಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಕಂಡಕ್ಟರ್ ಸಾವು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ




