Chikkamagaluru : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ.

Chikkamagaluru : ಡಿ.5ರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ (Sakarayapattana) ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಕಲ್ಮುರುಡೇಶ್ಚರ ಮಠದ ಬಳಿ ಮತ್ತೆ ಗಲಾಟೆ ನಡೆದಿತ್ತು. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ನಾಲ್ಕು ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು.
ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರ ರಾತ್ರಿ ಸಖರಾಯಪಟ್ಟಣದಲ್ಲಿ ಗಣೇಶ್ ಹತ್ಯೆ ನಡೆದಿತ್ತು. ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಗಣೇಶ್ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Must Read : Chikkamagaluru News : ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಕೇಸ್ – ಐವರು ಅರೆಸ್ಟ್ ,ಮೂವರಿಗಾಗಿ ಶೋಧ..!
ಪೊಲೀಸ್ ಕಸ್ಟಡಿಯಲ್ಲಿರುವ ಎ1 ಸಂಜಯ್ ಎ3 ನಾಗಭೂಷಣ್, ಎ6 ಮಿಥುನ್ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ಇದನ್ನು ನೋಡಿ : ಆಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನ ರೈತನ ರಾಗಿ ಹೊಲದಲ್ಲಿ ಕಾಣಿಕೆ ಹುಂಡಿ ಪತ್ತೆ




