Devanahalli Accident : ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ತಡರಾತ್ರಿ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತಕ್ಕೀಡಾಗಿದೆ. ದೇವನಹಳ್ಳಿಯ ಹಾಲಗೊಂಡನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ.

Devanahalli Accident : ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ತಡರಾತ್ರಿ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತಕ್ಕೀಡಾಗಿದೆ. ದೇವನಹಳ್ಳಿಯ ಹಾಲಗೊಂಡನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ.
ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಮೃತ ದುರ್ದೈವಿಗಳು. ಮೃತರೆಲ್ಲ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದವರು. ಸಾಗರ್ ಯಲಹಂಕದಲ್ಲಿ ಬಿಕಾಂ ಓದುತ್ತಿದ್ದ. ಸುಮನ್ ಹಾಗೂ ಮೋಹನ್ ಗ್ರಾನೈಟ್ ಉದ್ಯಮಿಗಳಾಗಿದ್ದವರು. ಮೂವರೂ ಸಾದಹಳ್ಳಿ ಗ್ರಾಮದ ಸ್ನೇಹಿತರಾಗಿದ್ದರು.
ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ, ಎದುರು ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಇದನ್ನು ಓದಿ : ಇವನು ಪಾಠ ಕಲಿಸುವ ಶಿಕ್ಷಕನಲ್ಲ..ಕಾಮ ಪಿಶಾಚಿ
ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನು ನೋಡಿ : ತುಮಕೂರಿನಲ್ಲಿ DEVIL ಅಬ್ಬರ D BOSS FANS FULL CRAZE | DEVIL FANS IN TUMAKURU