
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು 20 ಸೆಪ್ಟೆಂಬರ್ 2025ರಿಂದ 9 ಅಕ್ಟೋಬರ್ 2025ರವರೆಗೆ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್ ವಿಳಾಸ: chairpersonkseab@gmail.com ಗೆ ಅಥವಾ ಹಾರ್ಡ್ ಕಾಪಿ ಮೂಲಕ ಮುಖ್ಯ ಕಾರ್ಯಾಲಯಕ್ಕೆ ಕಳುಹಿಸಬೇಕು. ನಿಯೋಜಿತ ದಿನಾಂಕದ ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ತಾತ್ಕಾಲಿಕ ವೇಳಾಪಟ್ಟಿಯಂತೆ, ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಪರೀಕ್ಷೆ 2026ರ ಫೆಬ್ರವರಿ 28 ರಂದು ಪ್ರಾರಂಭವಾಗಿ ಮಾರ್ಚ್ 17 ರಂದು ಕೊನೆಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 2 ಏಪ್ರಿಲ್ 25 ರಿಂದ ಮೇ 9 ರವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆ – 1 ಮಾರ್ಚ್ 18 ರಿಂದ ಏಪ್ರಿಲ್ 1 ರವರೆಗೆ ನಡೆಯಲಿದೆ, ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ – 2 ಮೇ 18 ರಿಂದ ಮೇ 25 ರವರೆಗೆ ನಡೆಯಲಿದೆ. ಪರೀಕ್ಷೆಗಳ ಸಂಪೂರ್ಣ ವಿವರ ಮತ್ತು ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ www.kseab.karnataka.gov.in ನಲ್ಲಿ ಲಭ್ಯವಿದೆ.




