
CRICKET NEWS : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆನ್ನೆ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ನಡೆಯಿತು. ಕೇಂದ್ರ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳು ತೆಗೆದುಕೊಳ್ಳಲಾಯಿತು.
ಹಾಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷರಾಗಿರುವ ರಘುರಾಮ್ ಭಟ್ ಅವರನ್ನು ಬಿಸಿಸಿಐ ಖಜಾಂಚಿಯಾಗಿ ನೇಮಕ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಮಾಜಿ ಆಟಗಾರ ಮಿಥುನ್ ಮನ್ಹಾಸ್ ಅವರನ್ನು ಅಧ್ಯಕ್ಷರಾಗಿಆಯ್ಕೆ ಮಾಡಲಾಗಿದೆ.
ಈ ನಿಯೋಜನೆಗಳ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ. ಆದರೂ, ಮಹತ್ವದ ಘೋಷಣೆ ಸೆಪ್ಟೆಂಬರ್ 28 ರಂದು ನಡೆಯುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿಅಧಿಕೃತವಾಗಿ ಪ್ರಕಟವಾಗಲಿದೆ ಎನ್ನಲಾಗಿದೆ.




