ಕಲಬುರಗಿ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ಸಂಜೆ ಭೀಕರ Accident ಅಪಘಾತ ಸಂಭವಿಸಿದೆ.

ಕಲಬುರಗಿ ಸಂಚಾರಿ ಠಾಣೆ–1ರ ವ್ಯಾಪ್ತಿಯಲ್ಲಿ ಎರಡು KSRTC ಬಸ್ ಮತ್ತು ಜೀಪ್ ನಡುವೆ ಭೀಕರ ಸರಣಿ Accident ಸಂಭವಿಸಿದ್ದು, ಈ ಅಪಘಾತದಲ್ಲಿ ಗಂಡ–ಹೆಂಡತಿ ಸೇರಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಮೂವರು ದಾರುಣ ಸಾವು
ಇನ್ನು ಮೃತ ದುರ್ದೈವಿಗಳನ್ನು ಸುಲೋಚನಾ (70), ಚಂದ್ರಕಾಂತ್ (82) ಹಾಗೂ ಜೀಪ್ ಚಾಲಕ ಮಿಟ್ಟೆಸಾಬ್ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಇದನ್ನು ಓದಿ : ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು
KSRTC ಬಸ್ ಮತ್ತು ಜೀಪ್ ನಡುವೆ ಅಪಘಾತ
ಮೃತರು ಅಫಜಲಪುರ ತಾಲ್ಲೂಕಿನ ತೆಲ್ಲೂಣಗಿ ಗ್ರಾಮದ ನಿವಾಸಿಗಳಾಗಿದ್ದರು. ದಂಪತಿ ತಮ್ಮ ಗ್ರಾಮದಿಂದ ಕಲಬುರಗಿಗೆ ಜೀಪ್ನಲ್ಲಿ ತೆರಳುತ್ತಿದ್ದರು. ಅತಿವೇಗದ ಚಾಲನೆನಿಂದ ಎದುರಿಗೆ ಬರುತ್ತಿದ್ದ ಬಸ್ಗೆ ಜೀಪ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ದಂಪತಿ ಕೊನೆಯುಸಿರೆಳೆದಿದ್ದಾರೆ.
ಪ್ರಕರಣ ದಾಖಲು
ಇನ್ನು ಘಟನಾ ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಬಿಜಾಪುರದಲ್ಲಿದ್ರೆ ಯತ್ನಾಳ್ ಹೊರಗಡೆ ಬಂದ್ರೆ ಕಿತ್ನಾಳ್




