
BIDAR BUS ACCIDENT : ಬೀದರ್ ನಗರದಲ್ಲಿ ಇಂದು ಬೆಳಿಗ್ಗೆ ಕೆಕೆಆರ್ಟಿಸಿ (KKRTC) ಬಸ್ವೊಂದು ನಿಯಂತ್ರಣ ತಪ್ಪಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಕಂಪೌಂಡ್ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತ ಇಂದು ಬೆಳಿಗ್ಗೆ ಸಂಭವಿಸಿದ್ದು, ಬಸ್ ಬೀದರ್ನಿಂದ ಮಹಾರಾಷ್ಟ್ರದ ಉದಗೀರ್ ಕಡೆಗೆ ಹೊರಟಿತ್ತು. ಸುಮಾರು 6 ರಿಂದ 7 ಕಿಲೋಮೀಟರ್ ದೂರ ಪ್ರಯಾಣಿಸಿದ ನಂತರ, ಚಾಲಕನ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ಸಮಾಜ ಕಲ್ಯಾಣ ಇಲಾಖೆಯ ಗೋಡೆಗೆ ಡಿಕ್ಕಿ ಹೊಡೆದಿದೆ.
ಬಸ್ನಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್ಲರೂ ಸುರಕ್ಷಿತರಾಗಿದ್ದಾರೆ ಎನ್ನುವುದು ಎನ್ನಲಾಗಿದೆ.
ಇನ್ನು ಈ ಅಪಘಾತದಲ್ಲಿ ಬಸ್ ಮುಂಭಾಗದ ಭಾಗಕ್ಕೆ ನಷ್ಟವಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಗೋಡೆಯೂ ಭಾಗಶಃ ಹಾನಿಗೊಳಗಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




