Haveri : ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದ ಶಿಕ್ಷಕನ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Haveri : ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದ ಶಿಕ್ಷಕನ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಲಾಗಿತ್ತು.

ಪ್ರಕರಣದ ಹಿನ್ನೆಲೆ ?
ಡಿಸೆಂಬರ್ 10ರಂದು ಸವಣೂರಿನ ಶಾಲೆಯ ಮುಖ್ಯ ಶಿಕ್ಷಕ ರಾಜೇಸಾಬ ಖುದಾನಸಾಬ ಸಂಕನೂರ ಅವರು ಸವಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಶಿಕ್ಷಕ ಜಗದೀಶ್ ವಗ್ಗಣ್ಣನವರ ವಿರುದ್ಧ ಪ್ರಕರಣ ದಾಖಲಾಗಿತ್ತು.
MUST READ : ಇವನು ಪಾಠ ಕಲಿಸುವ ಶಿಕ್ಷಕನಲ್ಲ..ಕಾಮ ಪಿಶಾಚಿ
ಈಗ ಶಿಕ್ಷಕನಿಂದಲೇ ಪ್ರತಿದೂರು
ಈ ಪ್ರಕರಣದ ಬಳಿಕ ಶಿಕ್ಷಕ ಜಗದೀಶ್ ವಗ್ಗಣ್ಣನವರು ಕೂಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಾಲೆಯಲ್ಲಿ ತನ್ನ ಮೇಲೆ ಹಲ್ಲೆ ನಡೆಸಿ, ಚಪ್ಪಲಿಯಿಂದ ಹೊಡೆದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರಿದ್ದಾರೆ.
ವಿಡಿಯೋ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದ್ದು, ಅಪಮಾನ ಹಾಗೂ ಜೀವಬೆದರಿಕೆ ಆರೋಪದಡಿ 22 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಶಿಕ್ಷಕ ಒತ್ತಾಯಿಸಿದ್ದಾರೆ.
FIR ದಾಖಲಾಗಿರುವ ಪ್ರಮುಖ ಆರೋಪಿಗಳು
ಸಾದಿಕ್ ಮನಿಯಾರ್, ಜಿಶನ್ ನಾಗದ, ಅಬ್ದುಲಗನಿ ಪರಾಸ್, ಫಾಜಿಲ್ ಅಹ್ಮದ್ ಮನಿಯಾರ್, ಅತ್ತಾವುಲ್ಲ ಖಾನ್ ಭಕ್ಷಿ, ಸುಲೇದ್ ಮನಿಯಾರ್, ಮೋಷಿನ್ ಖತೀಬ್, ಆಸಿಫ್ ದುಖಂದರ್, ಇಮ್ರಾನ್ ಖಾಂಜಾಡೆ, ಮಹಮ್ಮದ್ ಅಸಂ ತೆಲಾರ್ ಸೇರಿದಂತೆ ಒಟ್ಟು 22 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಈವರೆಗೂ ಯಾವುದೇ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿಲ್ಲ. ಶಿಕ್ಷಕರ ನಡುವಿನ ವೈಮನಸ್ಸಿನಿಂದಲೇ ಈ ಘಟನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.ಸವಣೂರು ಪೊಲೀಸರು ಪ್ರಕರಣದ ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನು ನೋಡಿ : TUMAKURU | ರಾಜಕಾಲುವೆ ಮೇಲೆ ಅಕ್ರಮವಾಗಿ ಕಟ್ಟಿದ್ದ VAIBHAV DRIVE INN DABA ನೆಲಸಮ..!?




