ತಂಗಿಯ ಬರ್ತ್ಡೇ ಪಾರ್ಟಿಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ನೊಂದು ನವವಿವಾಹಿತೆ Suicide ಮಾಡಿಕೊಂಡಿರುವ ಶಂಕಾಸ್ಪದ ಘಟನೆ Bengaluru ನಲ್ಲಿ ನಡೆದಿದೆ.

ತಂಗಿಯ ಬರ್ತ್ಡೇ ಪಾರ್ಟಿಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ನೊಂದು ನವವಿವಾಹಿತೆ Suicide ಮಾಡಿಕೊಂಡಿರುವ ಶಂಕಾಸ್ಪದ ಘಟನೆ Bengaluru ನ ಉತ್ತರ ತಾಲೂಕಿನ ಶ್ಯಾಮಭಟ್ಟರಪಾಳ್ಯದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ತಿಪಟೂರು ಮೂಲದ ಐಶ್ವರ್ಯ (22) ಎಂದು ಗುರುತಿಸಲಾಗಿದೆ. ಐಶ್ವರ್ಯ ಅವರು ಕಳೆದ ಆರು ತಿಂಗಳ ಹಿಂದೆ ಲಕ್ಷ್ಮಿನಾರಾಯಣ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಕೊಂಚ ಇಳಿಕೆ ಕಂಡ ಚಿನ್ನದ ದರ
ಘಟನೆ ವಿವರ
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಐಶ್ವರ್ಯ ಸೀಲಿಂಗ್ ಹುಕ್ಗೆ ಹಗ್ಗದ ಮೂಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಂಗಿಯ ಬರ್ತ್ಡೇ ಪಾರ್ಟಿಗೆ ಕರೆದುಕೊಂಡು ಹೋಗದ ಕಾರಣದಿಂದ ಮನಸ್ಸಿಗೆ ನೋವಾಗಿ ಈ ಕೃತ್ಯಕ್ಕೆ ಮುಂದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ತನಿಖೆ
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : HASSAN|ಲಾರಿ ಗುದ್ದಿ ಟಿಸಿ ಸ್ಥಳದಲ್ಲೇ ಸಾ* – ಟಿಕೆಟ್ ಚೆಕ್ಕಿಂಗ್ ವೇಳೆ ಅಪಘಾ*




