Ramanagara : ಕರ್ನಾಟಕದಲ್ಲಿ ಕಾಡು ಪ್ರಾಣಿಗಳ ಕಾಟ ಮಿತಿ ಮೀರಿದ್ದು, ಮಾನವ ಜೀವಕ್ಕೂ ಗಂಭೀರ ಅಪಾಯ ಎದುರಾಗಿದೆ. ರಾಮನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾದ ಘಟನೆ ಬೆಳಕಿಗೆ ಬಂದಿದೆ.

Ramanagara : ಕರ್ನಾಟಕದಲ್ಲಿ ಕಾಡು ಪ್ರಾಣಿಗಳ ಕಾಟ ಮಿತಿ ಮೀರಿದ್ದು, ಮಾನವ ಜೀವಕ್ಕೂ ಗಂಭೀರ ಅಪಾಯ ಎದುರಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾದ ಘಟನೆ ಬೆಳಕಿಗೆ ಬಂದಿದೆ.
ಈ ನಡುವೆ ಉತ್ತರ ಕನ್ನಡದಲ್ಲಿ ಕಾಡಾನೆ ರಾಜ್ಯ ಹೆದ್ದಾರಿಯನ್ನು ತಡೆದು ಸಂಚಾರ ಅಸ್ತವ್ಯಸ್ತಗೊಳಿಸಿದೆ.
ದುನ್ನಸಂದ್ರದಲ್ಲಿ ಕಾಡಾನೆ ದಾಳಿ – ರೈತ ಸ್ಥಳದಲ್ಲೇ ಸಾವು
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದುನ್ನಸಂದ್ರ ಗ್ರಾಮದಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ರೈತ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ದುನ್ನಸಂದ್ರದ ರೈತ ದುಂಡಮಾದ (50) ಬೆಳಗಿನ ಜಾವ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರೈತ ಸಾಕಷ್ಟು ಸಮಯವಾದರೂ ಮನೆಗೆ ಮರಳದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ.
ಇದನ್ನು ಓದಿ : ಜನವರಿಯಲ್ಲಿ ಜೈಲಿನಿಂದ ಹೊರಗೆ ಬರ್ತಾರೆ ನಟ ದರ್ಶನ್..!
ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದ ಕಾಡಾನೆ?
ಗ್ರಾಮಸ್ಥರ ಪ್ರಕಾರ, ಈ ಕಾಡಾನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿದೆ ಎನ್ನಲಾಗುತ್ತಿದೆ.
ಕಾಡು ಪ್ರಾಣಿಗಳ ಹಾವಳಿ ಕುರಿತು ಮುಂಚಿತ ನಿಗಾ ವಹಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ: ರಾಜ್ಯ ಹೆದ್ದಾರಿಯ ಮಧ್ಯೆ ಕಾಡಾನೆ – ಸಂಚಾರ ಸ್ಥಗಿತ
ಇದಕ್ಕೆ ನಡುವೆ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕಾತೂರ ಗ್ರಾಮದ ಪಾಳಾ–ಕೊಡಂಬಿ ರಸ್ತೆಯಲ್ಲಿ ಕಾಡಾನೆ ರಸ್ತೆ ಮಧ್ಯೆ ನಿಂತು ವಿಶ್ರಾಂತಿ ಪಡೆದ ಘಟನೆ ನಡೆದಿದೆ.
ಒಂಟಿಸಲಗ ರಸ್ತೆ ತಡೆದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಸಂಪೂರ್ಣ ಸಂಚಾರ ಸ್ಥಗಿತಗೊಂಡಿತ್ತು.
ಮಧ್ಯ ರಸ್ತೆಯಲ್ಲಿ ನಿಂತಿದ್ದ ಕಾಡಾನೆಯನ್ನು ಕಂಡ ವಾಹನ ಸವಾರರು ಭಯದಿಂದ ಮುಂದೆ ಸಾಗಲಾಗದೇ ಪರದಾಡಿದರು.
ರಾಜ್ಯದ ಹಲವೆಡೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಸಾಕು ಪ್ರಾಣಿಗಳಷ್ಟೇ ಅಲ್ಲದೆ ಮನುಷ್ಯರ ಜೀವಕ್ಕೂ ಕುತ್ತು ಬಂದಿದೆ.
ಅರಣ್ಯ ಇಲಾಖೆ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಾನವ–ಕಾಡು ಪ್ರಾಣಿ ಸಂಘರ್ಷ ತಡೆಯಲು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ಇದನ್ನು ನೋಡಿ : RAILWAY ALERT🚨 | ಎರಡು ದಿನ ರೈಲು ಸರಿಯಾಗಿ ಓಡಾಡಲ್ಲ – ರೈಲ್ವೆ ಪ್ರಯಾಣಿಕರಿಗೆ ಎಚ್ಚರಿಕೆ




