
NELAMANGALA NEWS : ಬೆಂಗಳೂರು ಹೊರವಲಯದ ನೆಲಮಂಗಲ ತಾಲ್ಲೂಕಿನ ಗೆಜ್ಜಗದಹಳ್ಳಿ ಗ್ರಾಮ ದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಂಟ್ರಿಂಗ್ ಕಳಚುವ ವೇಳೆ ಒಬ್ಬ ಕಾರ್ಮಿಕನು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ.
ಮೃತನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (34)ಎಂದು ಗುರುತಿಸಲಾಗಿದೆ. ಕಳೆದ 8 ವರ್ಷಗಳಿಂದ ಬೀರಪ್ಪ ನೆಲಮಂಗಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿ ದ್ದರು. ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಂಟ್ರಿಂಗ್ ಕಳಚುವ ವೇಳೆ, ಬೀರಪ್ಪ ಎರಡನೇ ಮಹಡಿಯ ಮೇಲಿಂದ ಆಯತಪ್ಪಿ ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೀರಪ್ಪನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಇದಲ್ಲದೇ, ಬೀರಪ್ಪ ನೂರಾರು ಕಾರ್ಮಿಕರಿಗೆ ಕೆಲಸ ಒದಗಿಸಿ ಹಲವರಿಗು ಬದುಕಿನ ಆಧಾರವಾಗಿದ್ದರು ಎನ್ನಲಾಗಿದೆ. ಇನ್ನು ಘಟನೆ ಕುರಿತು ಮಾದನಾಯಕ ನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




