Belagavi POCSO case : ಬೆಳಗಾವಿಯ ಬೆಳಗುಂದಿ ಗ್ರಾಮದ ಗರ್ಲ್ಸ್ ಹೈಸ್ಕೂಲ್ನ ಪ್ರಿನ್ಸಿಪಾಲ್ ವಿದ್ಯಾರ್ಥಿಯರ ಜೊತೆಗೆ ಅಸಭ್ಯ ವರ್ತನೆ, ಅಶ್ಲೀಲ ಮೆಸೇಜ್ ಮಾಡಿದ್ದ ವಿಚಾರವಾಗಿ ಘಟನೆ ನಡೆದು ಎರಡು ದಿನಗಳ ಬಳಿಕ ಪೊಲೀಸರು ಪೋಕ್ಸೋ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಪ್ರಿನ್ಸಿಪಾಲ್ರಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದರು.

Belagavi POCSO case :ಗ್ರಾಮಸ್ಥರಿಂದ ಪ್ರಿನ್ಸಿಪಾಲ್ಗೆ ಧರ್ಮದೇಟು
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಗರ್ಲ್ಸ್ ಹೈಸ್ಕೂಲ್ನ ಪ್ರಿನ್ಸಿಪಾಲ್ ಕಲ್ಲಪ್ಪ ಬೆಳಗಾಂವಕರ್ ವಿರುದ್ಧ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪ ಕೇಳಿಬಂದಿತ್ತು.
ಈ ಕುರಿತು ಸಾಕ್ಷ್ಯಗಳು ಲಭ್ಯವಾಗಿದ್ದ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಶಾಲೆಗೆ ನುಗ್ಗಿ ಪ್ರಿನ್ಸಿಪಾಲ್ಗೆ ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದರು.
ಮೊದಲಿಗೆ ಕೇಸ್ ದಾಖಲಾಗಿರಲಿಲ್ಲ
ಘಟನೆ ನಡೆದ ತಕ್ಷಣವೇ ಪೋಷಕರು ಹಾಗೂ ವಿದ್ಯಾರ್ಥಿಗಳು ದೂರು ನೀಡಿದರೂ ಯಾವುದೇ ಕೇಸ್ ದಾಖಲಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಸಾಕ್ಷ್ಯಗಳಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದೇ ವೇಳೆ, ರಾಜಕೀಯ ಒತ್ತಡದಿಂದ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಗಂಭೀರ ಆರೋಪ ಮಾಡಿದ್ದರು.
ಇದನ್ನು ಓದಿ : ಓಡೋಡಿ ಬಂದು ಪ್ರಿಯಕರನ ಮದುವೆ ನಿಲ್ಲಿಸಿದ ಪ್ರೇಯಸಿ
2 ದಿನಗಳ ಬಳಿಕ ಪೊಲೀಸರಿಂದ ಸ್ವಯಂಪ್ರೇರಿತ ಕೇಸ್
ಸಾರ್ವಜನಿಕ ಒತ್ತಡ ಮತ್ತು ಚರ್ಚೆಯ ಬಳಿಕ, ಘಟನೆ ನಡೆದು ಎರಡು ದಿನಗಳ ನಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪೊಲೀಸರು,
“ವಿದ್ಯಾರ್ಥಿನಿಯ ಕುಟುಂಬಸ್ಥರಿಂದ ದೂರು ಬರುತ್ತದೆ ಎಂದು ಕಾಯಲಾಗಿತ್ತು. ಆದರೆ ಯಾವುದೇ ದೂರು ನೀಡದ ಹಿನ್ನೆಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.
ಯಾವುದೇ ಒತ್ತಡವಿಲ್ಲದೆ ತನಿಖೆ – ಪೊಲೀಸ್ ಕಮಿಷನರ್
ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು, ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಕರಣದ ಸಂಪೂರ್ಣ ತನಿಖೆ ನಡೆಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಈ ಘಟನೆ Belagavi POCSO case ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದು,ಶಾಲಾ ಪರಿಸರದಲ್ಲಿ ಮಕ್ಕಳ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.
ಪ್ರಕರಣದ ಮುಂದಿನ ತನಿಖೆ ಹಾಗೂ ಕಾನೂನು ಕ್ರಮದ ಮೇಲೆ ಸಾರ್ವಜನಿಕರ ಗಮನ ನೆಟ್ಟಿದೆ.
ಇದನ್ನು ನೋಡಿ : ಸಣ್ಣ ಅಂಗಡಿಯಲ್ಲಿ ಟೀ ಸವಿದು ಇಲ್ಲಿನ ಅತಿಥಿ ಸತ್ಕಾರಕ್ಕೆ ಫಿದಾ ಆದ ವಿದೇಶಿಗ




