Chinnaswamy Stadium ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಹಸಿರು ನಿಶಾನೆ ತೋರಲಿದೆಯೇ ಎಂಬುದು ಡಿ.16ರಂದು ಗೊತ್ತಾಗಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(Chinnaswamy Stadium) ಕ್ರಿಕೆಟ್ ಪಂದ್ಯಾವಳಿ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿದೆ. ಕಳೆದ ಜೂನ್ 4ರಂದು ನಡೆದ RCB ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಬಲಿಯಾದ ದುರ್ಘಟನೆ ನಂತರ, ಇದೇ ಮೊದಲ ಬಾರಿಗೆ ಇಲ್ಲಿ ಉನ್ನತ ಮಟ್ಟದ ಕ್ರಿಕೆಟ್ ಪಂದ್ಯಗಳು ಆಯೋಜನೆಯ ಸಾಧ್ಯತೆ ಮೂಡಿದೆ.
ಸರ್ಕಾರದಿಂದ ಅನುಮತಿ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ವಿ. ಪ್ರಸಾದ್ ನೇತೃತ್ವದಲ್ಲಿ ಕ್ರಿಕೆಟ್ ಪುನಾರಂಭಕ್ಕೆ ಸರ್ಕಾರದಿಂದ ಅನುಮತಿ ಪಡೆದಿದ್ದು, ಡಿಸೆಂಬರ್ 24ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯ ಕೆಲವು ಗುಂಪು ಪಂದ್ಯಗಳಿಗೆ ಬೆಂಗಳೂರು ಆತಿಥ್ಯ ನೀಡಲಿದೆ. ಸೆಲ್ಫ್ ತಂಡದ ಆಟಗಾರ ವಿರಾಟ್ ಕೊಹ್ಲಿಯೂ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನು ಓದಿ : Yashasvi Jaiswal ಸ್ಫೋಟಕ ಸೆಂಚುರಿ

IPL ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯನಲ್ಲಿ ನಡೆಯುವುದು ಖಚಿತ
KSCA ಪ್ರತಿ ಪಂದ್ಯಕ್ಕೂ 2,500–3,000 ಜನರಿಗೆ ಆಸನ ವ್ಯವಸ್ಥೆ ಮಾಡಲಿದೆ ಮತ್ತು ಕೆಲ ಪಂದ್ಯಗಳನ್ನು ಹೊರವಲಯದ ಆಲೂರು ಮೈದಾನದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಿದೆ. 2026ರ IPL ಪಂದ್ಯಗಳು Chinnaswamy Stadium ನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.
CID ಗೆ ಹೈಕೋರ್ಟ್ ಹಸಿರು ನಿಶಾನೆ
ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಹಸಿರು ನಿಶಾನೆ ತೋರಲಿದೆಯೇ ಎಂಬುದು ಡಿ.16ರಂದು ಗೊತ್ತಾಗಲಿದೆ.
ಈ ಪ್ರಕರಣದ ತನಿಖಾ ಪ್ರಗತಿ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿತ್ತು. ಅಂತೆಯೇ ತನಿಖೆ ಪೂರ್ಣಗೊಳಿಸಿ ಆರೋಪ ಪಟ್ಟಿಯನ್ನು ಸಿದ್ಧಪಡಿಸಿದೆ.

ಅರ್ಜಿ ವಿಚಾರಣೆ ಯಾವಾಗ?
ಆದರೆ ಹೈಕೋರ್ಟ್ ಅನುಮತಿ ಪಡೆದ ನಂತರವೇ ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಿಐಡಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಅರ್ಜಿ ವಿಚಾರಣೆ ಮಂಗಳವಾರ ನಡೆಯಲಿದ್ದು, ಅಂದು ನ್ಯಾಯಾಲಯವು ನೀಡುವ ಆದೇಶದತ್ತ ಸಿಐಡಿ ಚಿತ್ತ ಹರಿಸಿದೆ.
ಇದನ್ನು ನೋಡಿ : TUMAKURU ಪಾಲಿಕೆಯಲ್ಲಿ E-KHATA ಗೊಂದಲ – ಅಧಿಕಾರಿಗಳ ವಿರುದ್ಧJYOTHI GANESH ಗರಂ




