Weather Report : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ತಾಪಮಾನ – ಮೈಕೊರೆಯುವ ಚಳಿಗೆ ಜನರು ಫುಲ್ ಥಂಡಾ.. ಥಂಡಾ..

Weather Report : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದ್ದು, ಮೈಕೊರೆಯುವ ಚಳಿಗೆ ಜನರು ಥಂಡಾ ಹೊಡೆದಿದ್ದಾರೆ. ರಾಜ್ಯದ ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ 14 ಡಿಗ್ರಿಯಿಂದ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಚಳಿ ಜೊತೆ ಶೀತಗಾಳಿ ಬೀಸುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಲಿದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇತ್ತ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಕನಿಷ್ಠ 9 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಭಾರತದಿಂದ ಒಣಹವೆ ಪ್ರವೇಶಿಸಿರುವುದರಿಂದ ಚಳಿ ಹೆಚ್ಚಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ : Dina Bhavishya|ದಿನ ಭವಿಷ್ಯ 15 ಡಿಸೆಂಬರ್ 2025

ಮೈಕೊರೆಯುವ ಚಳಿಗೆ ಹೊರಬರಲು ಜನ ಹೈರಾಣು
ಇನ್ನು ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ತಾಪಮಾನ ಕುಸಿದಿದ್ದು, ಮೈ ಕೊರೆಯುವ ಚಳಿ ಆಗ್ತಿದೆ. ಬೆಳಗ್ಗೆ 8 ಗಂಟೆ ಆದ್ರು ಮೋಡ ಮುಸುಕಿದ ವಾತಾವರಣ ಇದ್ದು, ಜನರು ಮನೆಯಿಂದ ಹೊರ ಬರಲು ಕೂಡ ಭಯ ಪಡ್ತಾ ಇದ್ದಾರೆ. ಮೈಕೊರೆಯುವ ಚಳಿಗೆ ಜನರು ಅನಾರೋಗ್ಯಕ್ಕೀಡಾಗುತ್ತಿದ್ದು, ಆಸ್ಪತ್ರೆಗೆ ಹೋಗುವವರ ಸಂಖ್ಯೆ ಹೆಚ್ಚಳವಾಗ್ತಿದೆ.
ಯಾವಾಗ ಚಳಿ ಪ್ರಮಾಣ ಕಡಿಮೆ ಆಗುತ್ತೆ ?
ಡಿಸೆಂಬರ್ 17ರ ನಂತರ ರಾಜ್ಯದಲ್ಲಿ ಚಳಿ ನಿಧಾನವಾಗಿ ಕಡಿಮೆ ಆಗಲಿದ್ದು, ತಾಪಮಾನ ಏರಿಕೆ ಆಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ಮಕ್ಕಳು ಹಾಗೂ ವಯಸ್ಸಾದವರು ಬೆಳಗ್ಗೆ ವಾಕ್ ಮಾಡುವುದನ್ನ ತಪ್ಪಿಸಬೇಕಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನು ನೋಡಿ : ಗಂಡನಿಗೆ ಹೆಂಡ್ತಿ ಮೇಲೆ ಸಿಕ್ಕಾಪಟ್ಟೆ ಅನುಮಾನ? -ಮಟ ಮಟ ಮಧ್ಯಾಹ್ನವೇ ನಡೆಯಿತು ದುರಂತ




