Bangalore ನಲ್ಲಿ ಪಾರ್ಟಿ ಮಾಡುತ್ತಿದ್ದವರ ಬಳಿ ಹಣ ಕೇಳಿದ ಪೊಲೀಸರು; ಹೆದರಿ ಬಿಲ್ಡಿಂಗ್ನಿಂದ ಕೆಳಗೆ ಹಾರಿದ ಯುವತಿ?

ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿರುವ ಹಲವು ಘಟನೆಗಳು ಇತ್ತೀಚೆಗೆ ವರದಿಯಾಗಿದ್ದವು. ಅಂಥದೇ ಇನ್ನೊಂದು ಗಂಭೀರ ಅಪರಾಧದ ಆರೋಪ Bangaloreನ ಪೊಲೀಸರ ಮೇಲೆ ಕೇಳಿಬಂದಿದೆ. ಪಾರ್ಟಿ ಮಾಡುತ್ತಿದ್ದ ಯುವಕ- ಯುವತಿಯರಿಂದ ಪೊಲೀಸರು Raid ಮಾಡಿ ಹಣ ಕೇಳಿದ್ದಕ್ಕಾಗಿ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಾಯಗೊಂಡಿರುವ ಘಟನೆ ನಗರದಲ್ಲಿ ಪೊಲೀಸರ ಕಾರ್ಯವೈಖರಿ ಬಗ್ಗೆ ಸಂಚಲನ ಮೂಡಿಸಿದೆ.
ಸಾವು, ಬದುಕಿನ ನಡುವೆ ಹೋರಾಡುತ್ತಿರುವ ಯುವತಿ
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ಆಕೆಯ ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಇದನ್ನು ಓದಿ :
ಬಾಲ್ಕನಿಗೆ ಹೋಗಿ ಕೆಳಗೆ ಹಾರಿದ್ದಾಳೆ
ಇನ್ನು ಈ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ವೈಷ್ಣವಿ ಮತ್ತು ಆಕೆಯ ಸ್ನೇಹಿತರು ಹೋಟೆಲ್ನಲ್ಲಿ ಪಾರ್ಟಿ ಮಾಡುತ್ತಿದ್ದರು. ಸ್ಥಳೀಯರಿಂದ ಮಾಹಿತಿ ಲಭಿಸಿರುವುದರಿಂದ ಹೊಯ್ಸಳ ಪೊಲೀಸರು ಹೋಟೆಲ್ಗೆ ಭೇಟಿ ನೀಡಿದ್ದಾರೆ. ಈ ವೇಳೆ ಭಯಗೊಂಡ ವೈಷ್ಣವಿ ಬಾಲ್ಕನಿಗೆ ಹೋಗಿ ಕೆಳಗೆ ಹಾರಿದ್ದಾಳೆ. ಕೆಳಗೆ ಬಿದ್ದ ವೈಷ್ಣವಿಗೆ ಕಬ್ಬಿಣದ ಗ್ರಿಲ್ಗೆ ತಗುಲಿ ತಲೆ, ಕೈ ಮತ್ತು ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯವಾಗಿದೆ.
ಫೋನ್ ಪೇ ಬೇಡ ಕ್ಯಾಷ್ ಕೊಡಿ ಎಂದ ಪೊಲೀಸರು
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ಬಂದಿದೆ ಎಂದು ಹೇಳಿ ಪಾರ್ಟಿ ವಿಡಿಯೋ ತೋರಿಸಿದ್ದ ಪೊಲೀಸರು, ಬಳಿಕ ಹಣ ಕೇಳಿದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ATM ಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದ ವೇಳೆ ಯುವತಿ ಹೋಟೆಲ್ ಬಾಲ್ಕನಿಯಿಂದ ಹಾರಿದ್ದಾಳೆ ಎನ್ನಲಾಗಿದೆ.
FIR ದಾಖಲು
ಈ ಘಟನೆ ಸಂಬಂಧ HAL ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೋಟೆಲ್ ಮಾಲೀಕರ ಮೇಲೆಯೂ ಬಾಲ್ಕನಿ ಸುರಕ್ಷತೆ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಇದನ್ನು ನೋಡಿ : DEVIL MOVIE COLLECTION ಕೇಳಿದ್ರೆ ಶಾಕ್ ಆಗ್ತೀರಾ..? 4 ದಿನಕ್ಕೆ ಸಿನಿಮಾ ಬಾಚಿದ್ದೇಷ್ಟು ಗೊತ್ತಾ..?




