Bagalkot Crime News : ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ 7 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Bagalkot Crime News : ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ
ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ (Music Mailari) ಸೇರಿ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಿದ್ದು ಎಲ್ಲೆ ಯಾವಾಗ?
ಪೊಲೀಸ್ ಮೂಲಗಳ ಪ್ರಕಾರ, ಈ ಘಟನೆ 2025ರ ಅಕ್ಟೋಬರ್ 24ರಂದು,ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಮ್ಯೂಸಿಕ್ ಮೈಲಾರಿ ಹಾಡಲು ಆಗಮಿಸಿದ್ದ ಎನ್ನಲಾಗಿದೆ.
ಲಾಡ್ಜ್ಗೆ ಕರೆದುಕೊಂಡು ಹೋಗಿ ದೌರ್ಜನ್ಯ ಆರೋಪ
ಅದೇ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು
ಲಾಡ್ಜ್ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.
ಇದಲ್ಲದೆ,ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಬಾಲಕಿ ಮಾಡಿದ್ದಾಳೆ. ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡಿಸೆಂಬರ್ 14ರಂದು ದೂರು – ಬಳಿಕ ಪ್ರಕರಣ ವರ್ಗಾವಣೆ
ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ದೂರು ದಾಖಲಾಗಿತ್ತು .ನಂತರ ಡಿಸೆಂಬರ್ 15ರಂದು ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸದ್ಯ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ
ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಮ್ಯೂಸಿಕ್ ಮೈಲಾರಿ
ಮ್ಯೂಸಿಕ್ ಮೈಲಾರಿ ಹಾಡಿದ್ದ ಜಾನಪದ ಗೀತೆಗಳು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದವು.
ವಿಶೇಷವಾಗಿ ‘ಬಾಗಲಕೋಟೆ ಬಸ್ ಸ್ಟ್ಯಾಂಡ್ ನಾಗ…’ ಎಂಬ ಹಾಡು ಅಪಾರ ಜನಪ್ರಿಯತೆ ಗಳಿಸಿತ್ತು. ಆದರೆ ಈಗ ಇದೇ ಯೂಟ್ಯೂಬ್ ಸ್ಟಾರ್ ಮೇಲೆ ಗಂಭೀರ ಅಪರಾಧ ಆರೋಪ ದಾಖಲಾಗಿರುವುದು ಸಾರ್ವಜನಿಕರಲ್ಲಿ ಆಘಾತ ಮೂಡಿಸಿದೆ.




