Kumaraswamy ಯವರು ಇಂದು 66 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ (H.D Kumarswamy) ಇಂದು 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇನ್ನು Kumarswamy ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯವನ್ನು ತಿಳಿಸಿದರು. ಜನ್ಮದಿನಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ ಅವರಿಗೆ Kumarswamy ಧನ್ಯವಾದ ಅರ್ಪಿಸಿದ್ದಾರೆ. ಪ್ರಧಾನಿ ಅವರ ಶುಭಾಶೀರ್ವಾದಿಂದ ಭಾವುಕರಾಗಿರುವುದಾಗಿ ಕೇಂದ್ರ ಸಚಿವ ಹೇಳಿದರು.
ಇದನ್ನು ಓದಿ : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ

ಟ್ವೀಟ್ ಮಾಡಿ ಧನ್ಯವಾದ ತಿಳಿಸಿರುವ ಕುಮಾರಸ್ವಾಮಿ, ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆ.
ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ; ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ. ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ.
ನನ್ನನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ಅವರು ಇರಿಸಿರುವ ನಂಬಿಕೆಗೆ ನಾನು ಋಣಿಯಾಗಿದ್ದೇನೆ. ಸರ್, ತಮಗೆ ನನ್ನ ಹೃದಯಪೂರ್ವಕ ವಿನಮ್ರ ಧನ್ಯವಾದಗಳು ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಇದನ್ನು ನೋಡಿ : IPL 2026 Auction|ಬರೋಬ್ಬರಿ 25.2 ಕೋಟಿ ರೂ.ಗೆ ಗ್ರೀನ್ ಹರಾಜು




