Hassan : ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಕಾಟೀಹಳ್ಳಿ ಟೀಚರ್ಸ್ ಕಾಲೋನಿಯಲ್ಲಿ ಸಂಭವಿಸಿದೆ.

Hassan : ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಕಾಟೀಹಳ್ಳಿ ಟೀಚರ್ಸ್ ಕಾಲೋನಿಯಲ್ಲಿ ಸಂಭವಿಸಿದೆ. ಇದೇ ಅವಘಡದಲ್ಲಿ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.
ವಿದ್ಯುತ್ ತಂತಿ ದುರಸ್ತಿ ವೇಳೆ ಅವಘಡ
ಘಟನೆ ನಡೆದ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ, ಇಬ್ಬರೂ ಕಂಬದಿಂದ ಕೆಳಗೆ ಬಿದ್ದಿದ್ದಾರೆ.
ಬಿಹಾರ ಮೂಲದ ಯುವಕ ಮೃತ
ಈ ದುರಂತದಲ್ಲಿ ಬಿಹಾರ ಮೂಲದ ಬರಿಕುಲ್ (18) ಎಂಬ ಯುವಕ ಮೃತಪಟ್ಟಿದ್ದಾನೆ. ಅವಘಡದಲ್ಲಿ ಸಲೀಂ (17) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : ಪಾರ್ಸೆಲ್ ಒತ್ತು ಸಾಗುತ್ತಿದ್ದ ಬೃಹತ್ ಕಂಟೇನರ್ ಪಲ್ಟಿ
ಶಾಕ್ ಹೊಡೆದ ತಕ್ಷಣ ಸ್ಥಳ ತೊರೆದ ಇತರ ಕಾರ್ಮಿಕರು
ವಿದ್ಯುತ್ ಶಾಕ್ ತಗುಲುತ್ತಿದ್ದಂತೆ ಅಲ್ಲಿದ್ದ ಇನ್ನುಳಿದ ಮೂರು ಕಾರ್ಮಿಕರು ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಪೊಲೀಸ್ ಪರಿಶೀಲನೆ
ಈ ಘಟನೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ.
ಇದನ್ನು ನೋಡಿ : ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ – ಎಸ್ ಪಿ ಕೆ.ವಿ.ಅಶೋಕ್ ಏನಂದ್ರು ಗೊತ್ತಾ..?




