Mysore ಗೆ ಆಗಮಿಸಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಸ್ವಾಗತಿಸಿದರು.

Mysore ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಿಸಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿ ಅವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇದನ್ನು ಓದಿ : ಸರಳವಾಗಿ ಮದುವೆಯಾಗಲು ರೆಡಿಯಾದ Ugram Manju..!!
ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೂಗುಚ್ಛ ನೀಡಿ ಹಾರ್ದಿಕ ಸ್ವಾಗತಿಸಿದರು.
ಇನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕೂಡ ಉಪಸ್ಥಿತರಿದ್ದರು.
ಇದನ್ನು ನೋಡಿ : ಡಿಸಿ ಕಚೇರಿಗೆ ಬಾಂಬ್ ಬೆದರಿಕೆ HASSAN DC ಏನಂದ್ರು ಗೊತ್ತಾ

