ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

ಐಪಿಎಲ್ 2026ರ (ಸೀಸನ್–19) ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಒಟ್ಟು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಇದರಿಂದಾಗಿ ಹರಾಜಿನಲ್ಲಿ ಭಾಗವಹಿಸಲು ಆರ್ಸಿಬಿಗೆ 16.40 ಕೋಟಿ ರೂ. ಮೊತ್ತ ಲಭ್ಯವಿತ್ತು.
ಈ ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡ RCB ಫ್ರಾಂಚೈಸಿಯು ತನ್ನ ಮೊದಲ ಖರೀದಿಯಾಗಿ ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂ.ಗೆ ತಂಡಕ್ಕೆ ಸೇರಿಸಿಕೊಂಡಿದೆ. ಕಳೆದ ಐಪಿಎಲ್ ಸೀಸನ್ನಲ್ಲಿ ವೆಂಕಟೇಶ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಪರವಾಗಿ ಕಣಕ್ಕಿಳಿದಿದ್ದರು. ಇದೀಗ ಅವರು 2026ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿದ್ದಾರೆ.
ಇದನ್ನು ಓದಿ : ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಸ್ವಾಗತಿಸಿದ ರಾಜ್ಯಪಾಲರು

IPL ನಿಯಮಾವಳಿಯ ಪ್ರಕಾರ ಒಂದು ತಂಡದಲ್ಲಿ ಗರಿಷ್ಠ 25 ಆಟಗಾರರನ್ನು ಹೊಂದಲು ಅವಕಾಶವಿದೆ. ಈಗಾಗಲೇ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಆರ್ಸಿಬಿಗೆ ಇನ್ನೂ 8 ಆಟಗಾರರನ್ನು ಖರೀದಿಸುವ ಅವಕಾಶವಿತ್ತು. ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಿರುವುದರಿಂದ ಈಗ ಇನ್ನೂ 7 ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಾಗಿದೆ.
ಇನ್ನು ಕಳೆದ ಸೀಸನ್ನಲ್ಲಿ RCB 22 ಆಟಗಾರರ ತಂಡವನ್ನು ರೂಪಿಸಿತ್ತು. ಆದರೆ ಈ ಬಾರಿ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಉಳಿದ 16.40 ಕೋಟಿ ರೂ. ಬಜೆಟ್ನಲ್ಲಿ ಆರ್ಸಿಬಿ ಇನ್ನೆಷ್ಟು ಮತ್ತು ಯಾವ ರೀತಿಯ ಆಟಗಾರರನ್ನು ಖರೀದಿಸಲಿದೆ ಎಂಬುದನ್ನು ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಇದನ್ನು ನೋಡಿ : ‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ




