Hassan Child Death News : ಸೈಕಲ್ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್ಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣವನ್ನುಂಟುಮಾಡಿದೆ

Hassan Child Death News :ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ
ಮೃತ ಬಾಲಕನನ್ನು ಎಡನ್ ಸ್ವೀವ್ (4) ಎಂದು ಗುರುತಿಸಲಾಗಿದೆ. ಬಾಲಕ ಮನೆಯ ಮುಂದೆ ಸೈಕಲ್ನಲ್ಲಿ ಆಟವಾಡುತ್ತಿದ್ದನು. ಈ ವೇಳೆ ಪೋಷಕರು ಮನೆಯೊಳಗಿದ್ದರು.
ಸಂಪ್ ಬಳಿ ಬಿದ್ದ ಸೈಕಲ್ ಕಂಡು ಆತಂಕ
ಸ್ವಲ್ಪ ಸಮಯದ ಬಳಿಕ ಮಗುವಿನ ಶಬ್ದ ಕೇಳಿಸದ ಕಾರಣ ಪೋಷಕರು ಹೊರಬಂದು ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ನೀರಿನ ಸಂಪ್ ಬಳಿ ಮಗುವಿನ ಸೈಕಲ್ ಬಿದ್ದಿರುವುದು ಕಂಡುಬಂದಿದೆ. ಅನುಮಾನಗೊಂಡು ಸಂಪ್ ಪರಿಶೀಲಿಸಿದಾಗ, ಬಾಲಕನ ಶವ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ.
ಇದನ್ನು ಓದಿ : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ
ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಗು ಸಾವು
ತಕ್ಷಣ ಬಾಲಕನನ್ನು ಹಾಸನ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಮಗು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಪೊಲೀಸ್ ಪರಿಶೀಲನೆ
ಘಟನೆಯ ಮಾಹಿತಿ ತಿಳಿದ ತಕ್ಷಣ ಹಾಸನ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : IPL 2026 Auction|ಬರೋಬ್ಬರಿ 25.2 ಕೋಟಿ ರೂ.ಗೆ ಗ್ರೀನ್ ಹರಾಜು




