ರಾಜ್ಯದಲ್ಲಿ Heart Attack ನಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ.

ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳು ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ.
BCOM ವಿದ್ಯಾರ್ಥಿನಿ ದಾರುಣ ಸಾವು
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು. ಅವರು ಶೃಂಗೇರಿ ಪಟ್ಟಣದ BCM ಹಾಸ್ಟೆಲ್ನಲ್ಲಿ ವಾಸವಾಗಿದ್ದರು.
ಇದನ್ನು ಓದಿ : ಈ ಬಾರಿ ಧೋನಿ IPL ನಿವೃತ್ತಿ ಖಚಿತ?

Heart Attack ಗೆ ಬಲಿ
ಇಂದು ಬೆಳಗ್ಗೆ ಹಾಸ್ಟೆಲ್ನಲ್ಲಿದ್ದ ವೇಳೆ ದಿಶಾಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದು, ಅಷ್ಟರಲ್ಲೇ ದಿಶಾ ಸಾವನ್ನಪ್ಪಿದ್ದಾಳೆ.
ಪೊಲೀಸರು ಭೇಟಿ, ಪರಿಶೀಲನೆ
ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಇದನ್ನು ನೋಡಿ : ಬೇರೆ ಕ್ಷೇತ್ರಕ್ಕೆ ಅನುದಾನ ಕೊಡ್ತಾರೆ, ನಮಗೆ ಮಾತ್ರ ಕೊಡಲ್ಲ- CM ವಿರುದ್ಧ ಶಾಸಕ ಫುಲ್ ಗರಂ




