ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಆದಾಯ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Sheety) ಒಡೆತನದ ಐಷಾರಾಮಿ ಪಬ್ ಮೇಲೆ ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಇರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ IT ದಾಳಿ ನಡೆದಿದೆ.
ಪರಿಶೀಲನೆ
ದಾಳಿಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಐಟಿ ಅಧಿಕಾರಿಗಳು ಪಬ್ನಲ್ಲಿನ ಹಣಕಾಸು ವ್ಯವಹಾರಗಳು, ದಾಖಲೆಗಳು ಹಾಗೂ ಲೆಕ್ಕಪತ್ರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಹಲವು ಪ್ರಕರಣಗಳ ವಿಚಾರಣೆ
ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಈ ಐಟಿ ದಾಳಿ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ್ದೇ ಎಂಬ ಕುರಿತು ಹಲವು ಪ್ರಶ್ನೆಗಳು ಮೂಡಿವೆ.
ಜನಪ್ರಿಯ ಪಬ್
ಬ್ಯಾಸ್ಟಿಯನ್ ಪಬ್ ಬೆಂಗಳೂರು ನಗರದ ಅತ್ಯಂತ ದುಬಾರಿ ಹಾಗೂ ಜನಪ್ರಿಯ ಪಬ್ಗಳಲ್ಲಿ ಒಂದಾಗಿದ್ದು, ಈ ದಾಳಿಯು ನಗರದಲ್ಲಿ ಚರ್ಚೆಗೆ ಕಾರಣವಾಗಿದೆ. ಐಟಿ ಇಲಾಖೆಯ ಪರಿಶೀಲನೆ ಇನ್ನೂ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾದ ಬಳಿಕ ಸ್ಪಷ್ಟತೆ ಸಿಗಲಿದೆ.

ಇದನ್ನು ನೋಡಿ : ಮದುವೆಗೆ ಮುನ್ನ ಗೆಳತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ ರಶ್ಮಿಕಾ




