ಬೆಂಗಳೂರಲ್ಲಿ ಪಟಾಕಿ ಹೊಡೆಯಂಗಿಲ್ಲ – New Year Celebration ಗೆ ಗೈಡ್ಲೈನ್ಸ್..!

New Year 2025-26 ಆಚರಣೆಗೆ ಸಂಬಂಧಿಸಿದಂತೆ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಬಳಕೆಗೆ ತಡೆಯುವಂತೆ ಪೊಲೀಸ್ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಕ್ರಮದ ಹಿನ್ನೆಲೆ ಗೋವಾ ಪಬ್ ದುರ್ಘಟನೆ ಘಟನೆಗೆ ಸಂಬಂಧಿಸಿದಾಗಿದೆ, ಅದರಿಂದ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.
ಗೈಡ್ಲೈನ್ಸ್
ಡಿಸೆಂಬರ್ 31 ರಂದು ನಡೆಯುವ ನ್ಯೂ ಇಯರ್ ಕಾರ್ಯಕ್ರಮಗಳಿಗೆ ವಿಶೇಷ ಗೈಡ್ಲೈನ್ಸ್ ಪ್ರಕಟಿಸಲಾಗಿದೆ. ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ ಸೇರಿದಂತೆ ಕಾರ್ಯಕ್ರಮ ನಡೆಯುವ ಎಲ್ಲಾ ಜಾಗಗಳಿಗೆ ಈ ಮಾರ್ಗಸೂಚಿ ಅನ್ವಯವಾಗುತ್ತದೆ.
ಸಹಕಾರಕ್ಕೆ ಭರವಸೆ
ಈ ಮಾರ್ಗಸೂಚಿಯಲ್ಲಿ ಸುಮಾರು 19 ಮುಖ್ಯ ಅಂಶಗಳನ್ನು ಒಳಗೊಂಡಿದ್ದು, ಸಾರ್ವಜನಿಕರು ಸುರಕ್ಷಿತವಾಗಿ ಹಬ್ಬವನ್ನು ಆಚರಿಸಬೇಕೆಂದು ಸೂಚಿಸಲಾಗಿದೆ. ಪೊಲೀಸರು ಸಾರ್ವಜನಿಕರ ಸಹಕಾರಕ್ಕೆ ಭರವಸೆ ನೀಡಿದ್ದು, ಸುರಕ್ಷತೆ ಕಾಪಾಡುವ ಬಗ್ಗೆ ಗಮನಹರಿಸಬೇಕೆಂದು ಎಚ್ಚರಿಸಿದ್ದಾರೆ.
ಇದನ್ನು ಓದಿ : ಮತ್ತೆ ಏರಿಕೆ ಕಂಡ ಬಂಗಾರ
ಪೊಲೀಸ್ ಇಲಾಖೆಯ ಗೈಡ್ಲೈನ್ಸ್..!
ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮಗಳನ್ನ ಪಾಲಿಸಬೇಕು.
ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು
ಕಡ್ಡಾಯವಾಗಿ ಧ್ವನಿವರ್ದಕ ಪರವಾನಿಗೆ ಪಡೆದುಕೊಂಡ ನಂತರ ನಿಗಧಿತ ಶಬ್ಧ ಮಿತಿ ಇರಬೇಕು.
ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು
ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.
ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.
ಮಾದಕ ವಸ್ತುಗಳ ಬಳಕೆ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್ ವಿರುದ್ಧ ಕೇಸ್.
ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.
ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು.
ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನ ನೇಮಿಸಬೇಕು.
ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು.
ಪಾರ್ಟಿ ವೇಳೆ ಇರುವ ಕೆಲಸ ಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್ನೊಂದಿಗೆ ನೀಡಬೇಕು.
ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.
ಹೋಟೆಲ್ಗಳ ರೂಮ್ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.
ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.
ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ..
ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು..
ಇದನ್ನು ನೋಡಿ : ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆ ಬಾಕಿ ಇದೆ ಎಂದು ಒಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ : ಸದನದಲ್ಲಿ ಜೋರು ಚರ್ಚೆ
ಇನ್ನು ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಬೆಂಗಳೂರು ಪೊಲೀಸರು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.




