ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಭೀಕರ Car Accident.

ಬೆಳ್ಳಂಬೆಳಗ್ಗೆ ಶಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ Car Accident ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಇದೀಗ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಅಪಘಾತ ಶಿರಾ ತಾವರೆಕೆರೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಲಿಸುತ್ತಿದ್ದ ಲಾರಿಗೆ ಗುದ್ದಿದ ಕಾರು
ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಧಾರವಾಡ ಮೂಲದ ಇಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿ : ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಾರು ಸಂಪೂರ್ಣ ನಜ್ಜುಗುಜ್ಜು
ಇನ್ನು ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಚಾಲಕನ ಬದಿಯ ಒಂದು ಸೈಡ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತ ಸಂಬಂಧ ಶಿರಾ ತಾಲ್ಲೂಕಿನ ತಾವರೆಕೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : DODDABALLAPURA | ತಂಗಿ ಜೊತೆಯೇ ಸಲುಗೆ ಬೆಳಿಸಿದ ಗೆಳೆಯ – ವಾರ್ನಿಂಗ್ ಕೊಟ್ಟಿದ್ದಕ್ಕೆ ಕೊಂದೆ ಬಿಟ್ರು ಫ್ರೆಂಡ್ಸ್




