Belagavi ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕೂಲಿಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ಕಬ್ಬು ಗದ್ದೆಯಲ್ಲಿ ಕೆಲಸದ ವೇಳೆ ಭೀಕರ ಅಪಘಾತ
Belagavi ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕೂಲಿಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. .
ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆಂದು ಬಂದಿದ್ದ ಇಬ್ಬರು ಮಹಿಳೆಯರು, ಕಟಾವು ವೇಳೆ ಯಂತ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ಕಟಾವು ಮಾಡುವ ವೇಳೆ ಚಾಲಕ ಹಿಂದೆ-ಮುಂದೆ ಗಮನಿಸದೇ ಯಂತ್ರ ಚಲಾಯಿಸಿದ್ದಾನೆ. ಈ ವೇಳೆ ಇಬ್ಬರೂ ಮಹಿಳೆಯರ ತಲೆಗಳು ಕಟಾವು ಯಂತ್ರದಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ : ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ
ಮೃತ ಮಹಿಳೆಯರ ವಿವರ
ಈ ಭೀಕರ ಅಪಘಾತದಲ್ಲಿ ಮೃತಪಟ್ಟ ಮಹಿಳೆಯರನ್ನು
- ಬಾರವ್ವ ಕೋಬಡಿ (60)
- ಲಕ್ಷ್ಮೀಬಾಯಿ ರುದ್ರಗೌಡರ (65)
ಎಂದು ಗುರುತಿಸಲಾಗಿದೆ.
ಘಟನೆಯ ನಂತರ ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಪ್ರಕರಣ ದಾಖಲು, ತನಿಖೆ ಆರಂಭ
ಈ ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಚಾಲಕನ ನಿರ್ಲಕ್ಷ್ಯ ಹಾಗೂ ಸುರಕ್ಷತಾ ಕ್ರಮಗಳ ಕೊರತೆ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಇದನ್ನು ನೋಡಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ರಿಂದ ಗೃಹಲಕ್ಷ್ಮೀ ಯೋಜನೆ ಹಣದ ಅಪ್ಡೇಟ್




