Kalaburagi Suicide : ಬಿಜೆಪಿ ಕಾಯಕರ್ತೆಯೊಬ್ಬರು (BJP Worker) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ.

Kalaburagi Suicide : ಕಲಬುರಗಿ ಜಿಲ್ಲೆಯ ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿಕೂರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ನಡೆದಿದೆ.
ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ
ಮೃತರನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ಜ್ಯೋತಿ ಪಾಟೀಲ್ ಅವರು ನಂದಿಕೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಅವರ ಮನೆಗೆ ತೆರಳಿ ಬಾಗಿಲು ತಟ್ಟಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : Kalaburagi : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಯಶಸ್ವಿ
ನಂದಿಕೂರ ಗ್ರಾಮದಲ್ಲಿ ದುರ್ಘಟನೆ
ಘಟನೆಯ ವೇಳೆ ಮಲ್ಲಿನಾಥ್ ಬಿರಾದಾರ್ ಅವರು ಮನೆಯಲ್ಲಿ ಇರಲಿಲ್ಲ. ಅವರ ಪತ್ನಿ ಹಾಗೂ ಮೂರು ಜನ ಮಕ್ಕಳು ಮನೆಯಲ್ಲಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫರಹತಾಬಾದ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲು
ಪ್ರಾಥಮಿಕ ತನಿಖೆಯಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
MUST WATCH: ಪಾವಗಡದಲ್ಲಿ ಭೀಕರ ರಸ್ತೆ ಅಪಘಾ*- ಕಾರು ಚಾಲಕ ಸ್ಥಳದಲ್ಲೇ ಸಾ*




