
ದಸರಾ ಹಬ್ಬದ ರಜೆ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 26 ರಿಂದ 2,300 ಹೆಚ್ಚುವರಿ ಬಸ್ಗಳನ್ನು ಕೆಎಸ್ಆರ್ಟಿಸಿ ಕಾರ್ಯಾಚರಣೆ ಗಿಳಿಸಲಿದೆ.ಸೆ.26, 27 ಮತ್ತು ಸೆ.30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ಹೊರರಾಜ್ಯಗಳತ್ತ ಹೆಚ್ಚಿನ ಜನರು ಪ್ರಯಾಣಿಸುವ ನಿರೀಕ್ಷೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಸ್ಗಳು ಬೆಂಗಳೂರಿನ ಕೆಂಪೇಗೌಡ ಮೆಜೆಸ್ಟಿಕ್ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ನಿಲ್ದಾಣದಿಂದ ಹೊರಡಲಿವೆ. ಹಬ್ಬದ ನಂತರ ಅ.2 ಹಾಗೂ ಅ.5ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಮೈಸೂರು ದಸರಾ ವೀಕ್ಷಣೆಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 610 ವಿಶೇಷ ಬಸ್ಗಳು ಮತ್ತು ಪ್ಯಾಕೇಜ್ ಟೂರ್ಗಳ ವ್ಯವಸ್ಥೆ ಮಾಡಿಕೊಂಡಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ 260 ಹೆಚ್ಚುವರಿ ಬಸ್ಗಳು ಮೈಸೂರಿಗೆ ಸಂಚರಿಸಲಿವೆ. ಮೈಸೂರಿನ ದಸರಾ ಉತ್ಸವದಲ್ಲಿ ಭಕ್ತರು ಮತ್ತು ಪ್ರವಾಸಿಗರು ನಿರಾತಂಕವಾಗಿ ಪಾಲ್ಗೊಳ್ಳಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.
ಮೈಸೂರಿನ ಸುತ್ತಮುತ್ತಲಿನ ಪ್ರಮುಖ ತಾಣಗಳಾದ ಚಾಮುಂಡಿಬೆಟ್ಟ, ಕೆಆರ್ಎಸ್, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಎಚ್.ಡಿ. ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್. ನಗರ, ಗುಂಡ್ಲುಪೇಟೆ ಮತ್ತಿತರ ಪ್ರವಾಸಿ ಸ್ಥಳಗಳಿಗೆ 350 ಹೆಚ್ಚುವರಿ ಬಸ್ಗಳನ್ನು ಕೆಎಸ್ಆರ್ಟಿಸಿ ಕಾರ್ಯಾಚರಣೆ ಗಿಳಿಸುತ್ತಿದೆ. ಹೀಗಾಗಿ ಹಬ್ಬದ ದಿನಗಳಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಸಂಚಾರ ವ್ಯವಸ್ಥೆ ಕೈಗೊಳ್ಳಲಾಗಿದೆ.




