Dowry Murder Case : ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ವರದಕ್ಷಿಣೆಗಾಗಿ (Dowry) ಪತಿಯೇ (Husband) ಥಳಿಸಿ ಕೊಂದ ಘಟನೆ ತೆಲಂಗಾಣದ (Telangana) ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

Dowry Murder Case : ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ವರದಕ್ಷಿಣೆ ವಿಚಾರವಾಗಿ ಪತಿಯೇ ಹಲ್ಲೆ ನಡೆಸಿ ಕೊಂದಿರುವ ಘಟನೆ ಹೈದರಾಬಾದ್ನ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಅನುಷಾ (22) ಎಂದು ಗುರುತಿಸಲಾಗಿದ್ದು, ಮೃತ ಅನುಷಾ ಹಾಗೂ ಪರಮೇಶ್ ಕುಮಾರ್ ಇಬ್ಬರು ಸುಮಾರು ಎಂಟು ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಆದರೆ ಮದುವೆ ನಂತರ ವರದಕ್ಷಿಣೆ ವಿಚಾರವಾಗಿ ಆಗಾಗ್ಗೆ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಇನ್ನು ಎರಡು ದಿನಗಳ ಹಿಂದೆ ಇಬ್ಬರ ಮಧ್ಯೆ ಜಗಳವಾಗಿ ಅನುಷಾ ತನ್ನ ತವರು ಮನೆಗೆ ತೆರಳಿದ್ದರು. ಆದರೆ ಆಕೆಯ ಪತಿ ಇನ್ಮೇಲೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಭರವಸೆ ನೀಡಿ ಆಕೆಯನ್ನು ಮರಳಿ ಮನೆಗೆ ಕರೆದುಕೊಂಡು ಬಂದಿದ್ದಾನೆ.
ಆದರೆ ಮನೆ ಬಳಿ ಬರುತ್ತಿದ್ದಂತೆಯೇ ಆಕೆಯ ಮೇಲೆ ಹಲ್ಲೆ ನಡೆಸಿದಿರುವುದಾಗಿ ಆರೋಪಿಸಲಾಗಿದೆ. ಅಲ್ದೇ ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ | 11 ತಿಂಗಳ ಕಂದಮ್ಮ ಅನಾಥ
ಇನ್ನು ಕೂಡಲೇ ಗಂಭೀರವಾಗಿ ಗಾಯಗೊಂಡ ಅನುಷಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಸದ್ಯ ಅನುಷಾಳ ಸಹೋದರ ಫರಿಯಾದಿನ ಮೇರೆಗೆ ಆರೋಪಿಯಾದ ಪತಿ ಹಾಗೂ ಆತನ ತಾಯಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ
MUST WATCH: ಪಾವಗಡದಲ್ಲಿ ಭೀಕರ ರಸ್ತೆ ಅಪಘಾ*- ಕಾರು ಚಾಲಕ ಸ್ಥಳದಲ್ಲೇ ಸಾ* |




