ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ನಗರ ಶಾಸಕ ಜ್ಯೋತಿ ಗಣೇಶ್.

Tumakuru ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇಂದು ಪಲ್ಸ್ ಪೋಲಿಯೋ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ನಗರದ ದಿಬ್ಬೂರಿನ ಕ್ಲಿನಿಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ನಗರ ಶಾಸಕ ಜ್ಯೋತಿ ಗಣೇಶ್ ಉದ್ಘಾಟಿಸಿ, ಮಕ್ಕಳಿಗೆ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
“ಎರಡು ಹನಿಗಳು – ಪೋಲಿಯೋ ವಿರುದ್ಧ ನಿರಂತರ ಗೆಲುವು” ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್ ಅವರು, ಪೋಲಿಯೋ ರೋಗ ಸಂಪೂರ್ಣ ನಿರ್ಮೂಲನೆಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳು ಅತ್ಯಂತ ಮಹತ್ವದ್ದಾಗಿದ್ದು, ಪೋಷಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ತಾಲೂಕು ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಆರೋಗ್ಯಾಧಿಕಾರಿ ಚಂದ್ರಶೇಖರ್ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಪೋಲಿಯೋ ರೋಗದಿಂದ ಮಕ್ಕಳನ್ನು ರಕ್ಷಿಸುವಲ್ಲಿ ಲಸಿಕೆಗಳ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಪ್ರತಿಯೊಬ್ಬ ಪೋಷಕರ ಸಹಕಾರ ಅಗತ್ಯವೆಂದು ಅಧಿಕಾರಿಗಳು ತಿಳಿಸಿದರು.
ಇದನ್ನು ನೋಡಿ : ಜಿಹಾದಿ ಮನಸ್ಥಿತಿ ಉಳ್ಳವರನ್ನು ಮೊದಲು ಜೈಲಿಗೆ ಹಾಕಬೇಕಾಗುತ್ತದೆ: ಜೋಶಿ
ಈ ಪಲ್ಸ್ ಪೋಲಿಯೋ ಅಭಿಯಾನದಡಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಡ್ರಾಪ್ಸ್ ಹಾಕಲಾಗುತ್ತದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣಗಳು, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ವಿಶೇಷ ಲಸಿಕೆ ಕೇಂದ್ರಗಳನ್ನು ತೆರೆಯಲಾಗಿದೆ.

ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ತುಮಕೂರು ನಗರದ ವಿವಿಧ ಭಾಗಗಳಲ್ಲಿ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಪೋಷಕರು ಸರ್ಕಾರದ ಈ ಮಹತ್ವದ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನು ಓದಿ : T-20 ವಿಶ್ವಕಪ್–2026ಕ್ಕೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ – ಶುಭ್ಮನ್ ಗಿಲ್ ಕಿಕ್ ಔಟ್




