Belagavi : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

Belagavi : ಬೆಳಗಾವಿ ಪೋಕ್ಸೊ ನ್ಯಾಯಾಲಯದ ಮಹತ್ವದ ತೀರ್ಪು
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ
35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಮಠಕ್ಕೆ ಬಂದ ಅಪ್ರಾಪ್ತೆಯನ್ನು ಕಾರಿನಲ್ಲಿ ಕರೆದೊಯ್ದ ಸ್ವಾಮೀಜಿ
ಮೇ 13ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಸ್ವಾಮೀಜಿ ಪುಸಲಾಯಿಸಿ ತನ್ನ ಕಾರಿನಲ್ಲಿ ಕರೆದೊಯ್ದಿದ್ದಾನೆ. ಬಳಿಕ ರಾಯಚೂರು, ಬಾಗಲಕೋಟೆ ಸೇರಿದಂತೆ ಹಲವು ಸ್ಥಳಗಳಿಗೆ ಸುತ್ತಾಡಿಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ
ಅತ್ಯಾಚಾರ ಎಸಗಿ ಬಳಿಕ ಆರೋಪಿಯು ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಕುರಿತು ಅಪ್ರಾಪ್ತ ಬಾಲಕಿ ಕುಟುಂಬದವರು ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ಇದನ್ನು ಓದಿ : ತುಮಕೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಮೇ 24ರಂದು ಬಂಧನ
ಪೊಲೀಸರು ತ್ವರಿತ ಕ್ರಮ ಕೈಗೊಂಡು ಮೇ 24ರಂದು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ಸಂಪೂರ್ಣ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಕರಣ ಸಾಬೀತಾಗಿ ಇದೀಗ ಕಠಿಣ ಶಿಕ್ಷೆ ವಿಧಿಸಲಾಗಿದೆ.
ಧರ್ಮ, ಮಠ, ಸ್ಥಾನಮಾನ ಯಾವುದೇ ಇರಲಿ ಅಪರಾಧ ಮಾಡಿದವರಿಗೆ ಕಠಿಣ ಶಿಕ್ಷೆ ತಪ್ಪದು ಎಂಬ ಸ್ಪಷ್ಟ ಸಂದೇಶವನ್ನು ಈ ತೀರ್ಪು ನೀಡಿದೆ. ಅಪ್ರಾಪ್ತರ ರಕ್ಷಣೆಗೆ ಪೋಕ್ಸೊ ಕಾಯ್ದೆ ಎಷ್ಟು ಪರಿಣಾಮಕಾರಿಯಾಗಿದೆ ಎಂಬುದಕ್ಕೂ ಇದು ಉದಾಹರಣೆ.
ಇದನ್ನು ನೋಡಿ : ಸಹಾಯ ಪಡೆದವಳನ್ನ ಮಂಚಕ್ಕೆ ಕರೆದ ಆನ್ಲೈನ್ ಗೆಳೆಯ – ಮಹಿಳೆ ಆತ್ಮಹತ್ಯೆಗೆ ಯತ್ನ




